ವಿಐಎಸ್‌ಎಲ್ ಉಳಿಸಿ ಹೋರಾಟ: ಭದ್ರಾವತಿಯಲ್ಲಿ ಸ್ವಯಂ ಪ್ರೇರಿತ ಬಂದ್
🎬 Watch Now: Feature Video
ಶಿವಮೊಗ್ಗ: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ವಿರೋಧಿಸಿ ಭದ್ರಾವತಿ ಪಟ್ಟಣ ಬಂದ್ಗೆ ಕರೆ ನೀಡಲಾಗಿದೆ. ಇಂದು ಮುಂಜಾನೆಯಿಂದಲೇ ವ್ಯಾಪಾರಿಗಳು ತಮ್ಮಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಗುತ್ತಿಗೆ ಕಾರ್ಮಿಕ ಸಂಘ ಕರೆ ನೀಡಿದ ಈ ಬಂದ್ಗೆ ಸಿಐಟಿಯು ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಹಲವು ಸಂಘಟನೆಗಳ ಸದಸ್ಯರು ಬೆಳಗ್ಗೆಯಿಂದಲೇ ರಸ್ತೆಗಿಳಿದು ಪ್ರತಿಭಟನೆ ನಡೆಸಿ, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಮನವಿ ಮಾಡುತ್ತಿದ್ದಾರೆ. ಅಲ್ಲದೇ ಪ್ರಮುಖ ವೃತ್ತಗಳಿಗೆ ತೆರಳಿ ಕಾರ್ಮಿಕ ಸಂಘಟನೆಗಳು ಟೈರ್ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕುತ್ತಿದ್ದಾರೆ.
ವಿಐಎಸ್‌ಎಲ್ ಯಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಿ ಅಂಡರ್ ಬ್ರಿಡ್ಜ್ ಹಾಗೂ ಬಿ.ಹೆಚ್ ರಸ್ತೆಯ ಮೂಲಕ ಮಾಧವಚಾರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋ ಬಸ್ತ್ ವ್ಯವಸ್ಥೆ ಮಾಡಿದೆ.
ಇದನ್ನೂ ಓದಿ: ವಿಐಎಸ್‌ಎಲ್ ಕಾರ್ಖಾನೆ ಮತ್ತೆ ಆರಂಭವಾಗಿ ಲಾಭದಲ್ಲಿ ನಡೆಯಬೇಕು: ಸಿಎಂ ಬೊಮ್ಮಾಯಿ