ಬಿಎಂಟಿಸಿ ಬಸ್ ಬ್ರೇಕ್ ಫೇಲ್ನಿಂದ ಸರಣಿ ಅಪಘಾತ - ಕಾರ್ಪೋರೇಷನ್ ಸಿಗ್ನಲ್
🎬 Watch Now: Feature Video
ಬೆಂಗಳೂರು : ಬಿಎಂಟಿಸಿ ಬಸ್ನ ಬ್ರೇಕ್ ಫೇಲ್ ಆದ ಪರಿಣಾಮ ಸರಣಿ ಅಪಘಾತ ಸಂಭವಿಸಿದ ಘಟನೆ ನಗರದ ಕಾರ್ಪೋರೇಷನ್ ಸಿಗ್ನಲ್ ಬಳಿ ನಡೆದಿದೆ. ಶಿವಾಜಿನಗರ ಕಡೆಯಿಂದ ಬರುತ್ತಿದ್ದ ಬಿಎಂಟಿಸಿ ಬಸ್ ಕಾರ್ಪೋರೇಷನ್ ಸಿಗ್ನಲ್ ಬಳಿ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಖಾಸಗಿ ಬಸ್ಗಳ ನಡುವೆ ಭೀಕರ ಅಪಘಾತ: ಇಬ್ಬರು ಸಾವು
ಘಟನೆಯಲ್ಲಿ ಎರಡು ಕಾರು ಹಾಗೂ ಆಟೋ ಪರಸ್ಪರ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತದಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಹಲಸೂರು ಗೇಟ್ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ: ಇನ್ನೊಂದೆಡೆ ಎರಡು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕು ಚೋರಡಿ ಸೇತುವೆ ಬಳಿ ಗುರುವಾರ (ಮೇ 11-2023) ಸಂಜೆ ನಡೆದಿತ್ತು. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕಾಳಪ್ಪ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಶ್ರೀನಿವಾಸ ಬಸ್ಗಳು ಮುಖಾಮುಖಿ ಡಿಕ್ಕಿಯಾಗಿವೆ ಎಂದು ತಿಳಿದುಬಂದಿತ್ತು.
ಇದನ್ನೂ ಓದಿ: ಮಂಗಳೂರು ಕದ್ರಿ ದೇಗುಲದ ಬಳಿ ರಾತ್ರಿ ಅನುಮಾನಾಸ್ಪದ ತಿರುಗಾಟ: ಮೂವರು ಪೊಲೀಸರ ವಶಕ್ಕೆ