ಈರುಳ್ಳಿ ರಫ್ತು ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ.. ಶರದ್ ಪವಾರ್ ಭಾಗಿ - Dilip Bankar
🎬 Watch Now: Feature Video
Published : Dec 11, 2023, 6:53 PM IST
ನಾಸಿಕ್ (ಮಹಾರಾಷ್ಟ್ರ) : ಹೆಚ್ಚುತ್ತಿರುವ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದಲ್ಲಿ ಈರುಳ್ಳಿ ಲಭ್ಯತೆ ಹೆಚ್ಚಿಸುವ ಸಲುವಾಗಿ ರಫ್ತು ನಿಷೇಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ, ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಶರದ್ ಪವಾರ್ ನೇತೃತ್ವದಲ್ಲಿ ನಾಸಿಕ್‌ನ ಚಂದವಾಡದಲ್ಲಿ ಈರುಳ್ಳಿ ರಫ್ತು ನಿಷೇಧಾಜ್ಞೆ ಹಿಂಪಡೆಯುವಂತೆ ಒತ್ತಾಯಿಸಿ ಸಾವಿರಾರು ರೈತರು ಬೀದಿಗಿಳಿದಿದ್ದರು.
ಮಹಾರಾಷ್ಟ್ರದಲ್ಲಿ ಈರುಳ್ಳಿ ಸಮಸ್ಯೆ ಹೆಚ್ಚಾಗಿದೆ. ಈರುಳ್ಳಿ ಬೆಲೆ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ 2024ರ ಮಾರ್ಚ್ವರೆಗೆ ಈರುಳ್ಳಿ ರಫ್ತಿಗೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಈ ನಿರ್ಧಾರಕ್ಕೆ ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಶರದ್ ಪವಾರ್ ನೇತೃತ್ವದಲ್ಲಿ ಚಂದವಾಡದ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಈ ಪ್ರತಿಭಟನೆಯಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು. ಈ ಬಾರಿ ರೈತರು ಸರ್ಕಾರದ ನಿರ್ಧಾರದ ವಿರುದ್ಧ ಘೋಷಣೆಗಳನ್ನು ಎತ್ತಿದ್ದರು ಮತ್ತು ಮಹಾರಾಷ್ಟ್ರದ ವಿವಿಧೆಡೆ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ.
ಈರುಳ್ಳಿ ವಿಚಾರವಾಗಿ ದೆಹಲಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್, ನಾಸಿಕ್‌ನ ವ್ಯಾಪಾರಿಗಳು ಪಾಲ್ಗೊಳ್ಳುವ ಸಾಧ್ಯತೆಯಿದೆ. ಕೇಂದ್ರದ ಈರುಳ್ಳಿ ರಫ್ತು ನಿಷೇಧದಿಂದಾಗಿ ಜಿಲ್ಲೆಯಲ್ಲಿ ಈರುಳ್ಳಿ ಹರಾಜು ಪ್ರಕಿಯೆ ಸ್ಥಗಿತಗೊಳಿಸಲಾಗಿದೆ. ನಾಸಿಕ್ ಶಾಸಕ ದಿಲೀಪ್ ಬಣಕಾರ್ ಅವರು ಸಚಿವ ಪಿಯೂಷ್ ಗೋಯಲ್, ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಸರ್ಕಾರದಿಂದ ಮಹತ್ವದ ನಿರ್ಧಾರ, ಈರುಳ್ಳಿ ಬೆಲೆಗೆ ಕಡಿವಾಣ ಹಾಕಲು ರಫ್ತು ನಿಲ್ಲಿಸಿದ ಕೇಂದ್ರ