ಸಿದ್ದಗಂಗಾ ಶಿವಕುಮಾರ ಶ್ರೀಗಳ ಜನ್ಮದಿನ.. 116 ಮಕ್ಕಳಿಗೆ ಸ್ವಾಮೀಜಿಯವರ ಹೆಸರು ನಾಮಕರಣ - ಶಿವಕುಮಾರ ಸ್ವಾಮೀಜಿ
🎬 Watch Now: Feature Video
ತುಮಕೂರು: ಇಂದು (ಏ.1) ಲಕ್ಷಾಂತರ ಮಕ್ಕಳಿಗೆ ಆಶ್ರಯ, ಅನ್ನ ,ಅಕ್ಷರ ನೀಡಿದ ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಪ್ರಸಿದ್ದವಾಗಿದ್ದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ 116 ನೇ ಜನ್ಮದಿನೋತ್ಸವ. ಈ ಹಿನ್ನೆಲೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ 116 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ ಮಾಡುವ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಂಡು ಮಕ್ಕಳಿಗೆ ಶಿವಕುಮಾರ ಎಂದು ನಾಮಕರಣ ಮಾಡಿದರೆ, ಹೆಣ್ಣು ಮಕ್ಕಳಿಗೆ ಶಿವಾನಿ ಎಂದು ನಾಮಕರಣ ಮಾಡಲಾಯಿತು.
ಸಿದ್ದಗಂಗಾ ಮಠದ ಆವರಣದಲ್ಲಿರುವ ವಜ್ರಮಹೋತ್ಸವ ಕಟ್ಟಡದ ಸಭಾಂಗಣದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನಡೆಯಿತು. ನಾಮಕರಣ ಮಾಡಲಾದ ಮಕ್ಕಳಿಗೆ ತೊಟ್ಟಿಲು ಹಾಗೂ ಬಟ್ಟೆಯನ್ನು ಮಠದಿಂದ ವಿತರಿಸಲಾಯಿತು.
ಪ್ರಧಾನಿ ಮೋದಿ ಟ್ವೀಟ್: "ಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟು ಹಬ್ಬದ ಈ ವಿಶೇಷ ಸಂದರ್ಭದಲ್ಲಿ ಅವರಿಗೆ ನನ್ನ ನಮನ. ಅವರು ಲಕ್ಷಾಂತರ ಜನರ ಮೇಲೆ ಅಪಾರ ಪ್ರಭಾವ ಬೀರಿದ್ದಾರೆ. ಸಮಾಜ ಸೇವೆಗೆ ಉನ್ನತ ಸ್ಥಾನ ಮತ್ತು ಜನರನ್ನು ಸಶಕ್ತಗೊಳಿಸುವುದಕ್ಕೆ ಅವರು ಪ್ರಾಮುಖ್ಯತೆ ನೀಡಿದ್ದರು. ಅವರ ಕನಸುಗಳನ್ನು ಪೂರೈಸಲು ನಾವು ಸದಾ ಶ್ರಮಿಸುತ್ತೇವೆ" ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಶಿವಕುಮಾರ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ : ಮಠದಲ್ಲಿ ಸಕಲ ಸಿದ್ಧತೆ