ಪುತ್ತೂರು: ಮಹಾತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಆಚರಣೆ

By

Published : Feb 18, 2023, 6:43 PM IST

thumbnail

ಪುತ್ತೂರು: ಮಹಾ ಶಿವರಾತ್ರಿ ನಿಮಿತ್ತ ಇಲ್ಲಿಯ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ಬೆಳಗಿನಿಂದಲೇ ಶಿವನಿಗೆ ವಿಶೇಷ ಪೂಜೆಗಳು ನಡೆದವು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸಿ ದೇವರ ದರ್ಶನ ಪಡೆದು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಬೆಳಗ್ಗೆ 8ರಿಂದ ವೇದ ಸಂವರ್ಧನಾ ಪ್ರತಿಷ್ಠಾನದ ಸಹಯೋಗದಲ್ಲಿ ದೇವಾಲಯದ ಹೊರ ಭಾಗದಲ್ಲಿ ಏಕಕಾಲದಲ್ಲಿ ರುದ್ರ ಪಠಣ ಮಾಡುವ ಮೂಲಕ ಮಹಾ ರುದ್ರ ಯಾಗ ನಡೆಸಲಾಯಿತು.

ರಾತ್ರಿ ಹೊರಾಂಗಣದ ಕಂಡನಾಯ್ಕನ ಕಟ್ಟೆಯಲ್ಲಿ ಅಷ್ಟಾವಧಾನ ಸೇವೆ ನಡೆಯಲಿದೆ. ರಾತ್ರಿ ಶ್ರೀ ದೇವರ ಬಲಿ ಹೊರಟು ಒಳಾಂಗಣದಲ್ಲಿ ಸಾಂಪ್ರದಾಯಿಕ ಸುತ್ತು ಬಲಿ, ಹೊರಾಂಗಣದಲ್ಲಿ ದೇವರ ಬಲಿ ಉತ್ಸವ, ಪಲ್ಲಕ್ಕಿ ಉತ್ಸವ, ಚಂದ್ರಮಂಡಲ ರಥೋತ್ಸವದ ಬಳಿಕ ದೇವರ ತೆಪ್ಪೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಲಿದೆ.

ಇದನ್ನೂ ಓದಿ: ವಿಶ್ವ ಪ್ರಸಿದ್ಧ ಮುರುಡೇಶ್ವರಕ್ಕೆ ಹರಿದು ಬಂದ ಭಕ್ತ ಸಾಗರ - ವಿಡಿಯೋ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.