ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯಸ್ಮರಣೆ
🎬 Watch Now: Feature Video
ತುಮಕೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 4ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ನಿಮಿತ್ತ ಇಂದು ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿವೆ. ಮುಂಜಾನೆ 4.30 ರಿಂದ ಬ್ರಾಹ್ಮೀ ಮುಹೂರ್ತದಲ್ಲಿ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು. ಮಹಾರುದ್ರಾಭಿಷೇಕ ಮತ್ತು ರಾಜೋಪಚಾರ, ಬಿಲ್ವಾರ್ಚನೆ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.
ಬೆಳಗ್ಗೆ ಮಠದ ಸಾವಿರಾರು ವಿದ್ಯಾರ್ಥಿಗಳು ವಿಶೇಷ ಸಾಮೂಹಿಕ ಪ್ರಾರ್ಥನೆ ಮಾಡಿದರು. ಕಳೆದ ಎರಡು ವರ್ಷಗಳಲ್ಲಿ ಕೋವಿಡ್ನಿಂದಾಗಿ ಕಾರ್ಯಕ್ರಮವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಈ ಬಾರಿ ಸಂಸ್ಮರಣೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಶ್ರೀಗಳ ಗದ್ದುಗೆಯನ್ನು ವಿವಿಧ ಫಲ ಪುಷ್ಪಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಸುಮಾರು ಐದು ಲಕ್ಷ ಭಕ್ತರು ಆಗಮಿಸಲಿದ್ದಾರೆ.
ಇದನ್ನು ಓದಿ:'ಮೌನಿ ಅಮಾವಾಸ್ಯೆ' ಹಿನ್ನೆಲೆ ವಾರಾಣಸಿಯಲ್ಲಿ ಭಕ್ತರಿಂದ ಪೂಜೆ: ವಿಡಿಯೋ
TAGGED:
shri shivakumar swamiji