ಮಲೆನಾಡಿನಲ್ಲಿ ವರುಣನಾರ್ಭಟ.. ಕಪ್ಪೆ ಶಂಕರ ದೇವಾಲಯ ಸಂಪೂರ್ಣ ಮುಳುಗಡೆ
🎬 Watch Now: Feature Video
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶೃಂಗೇರಿ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗಿವೆ. ತುಂಗಾ ನದಿ ತಟದಲ್ಲಿರುವ ಕಪ್ಪೆ ಶಂಕರ ದೇವಸ್ಥಾನ ಸಹ ಸಂಪೂರ್ಣ ಮುಳುಗಡೆಯಾಗಿದ್ದು, ನದಿ ಪಾತ್ರದ ರಸ್ತೆಗಳನ್ನು ಪೊಲೀಸರು ಸಂಪೂರ್ಣ ಬಂದ್ ಮಾಡಿದ್ದಾರೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಐದು ತಾಲೂಕುಗಳಲ್ಲಿ ನಾಲ್ಕು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
Last Updated : Feb 3, 2023, 8:24 PM IST