ಹಾಲುಮತ ಸಮಾಜದ ಮುಖಂಡರಿಂದ ಸಿದ್ದರಾಮಯ್ಯ ಭಾವಚಿತ್ರಕ್ಕೆ ಕ್ಷೀರಾಭಿಷೇಕ: ವಿಡಿಯೋ - Raichur

🎬 Watch Now: Feature Video

thumbnail

By

Published : May 19, 2023, 2:16 PM IST

ರಾಯಚೂರು: ರಾಜ್ಯದಲ್ಲಿ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಂದಿಶ್ವೇರ ದೇವಸ್ಥಾನದ ಬಳಿ ಅವರ ಭಾವಚಿತ್ರಕ್ಕೆ ಹಾಲುಮತ ಸಮುದಾಯದ ಮುಖಂಡರು ಕ್ಷೀರಾಭಿಷೇಕ ಮಾಡಿ ಸಂಭ್ರಮಿಸಿದರು.

"ಹಿಂದುಳಿದ ವರ್ಗಗಳ ಸಮುದಾಯದಲ್ಲಿರುವ ಸಿದ್ಧರಾಮಯ್ಯ ನಮ್ಮ ಸಮುದಾಯದ ಪ್ರಶ್ನಾತೀತ ನಾಯಕರು. ಅವರು ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿರುವಾಗ 5 ವರ್ಷಗಳ ಕಾಲ ಜನಪರ ಆಡಳಿತ ನೀಡಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದುಕೊಂಡಿದೆ. ನಾಳೆ ಕಾಂಗ್ರೆಸ್ ಪಕ್ಷ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿದೆ. ಸಿದ್ಧರಾಮಯ್ಯ ಅವರು 2ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದು ಸಮಾಜಕ್ಕೆ ಹೆಮ್ಮ ವಿಷಯ" ಎಂದು ಹಾಲುಮತ ಸಮಾಜದ ಜಿಲ್ಲಾಧ್ಯಕ್ಷ ಕೆ.ಬಸವಂತಪ್ಪ ಹರ್ಷ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕಕ್ಕೂ ಮುನ್ನ ನಂದಿಶ್ವೇರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಹಾಲುಮತ ಸಮಾಜದ ಮುಖಂಡರು ಹಾಲು ತುಂಬಿದ ಬಿಂದಿಗೆಯೊಂದಿಗೆ ದೇವಸ್ಥಾನಕ್ಕೆ ಬಂದು ನಂದಿಶ್ವರ ಸ್ವಾಮಿಗೆ ಅಭಿಷೇಕ ನೆರವೇರಿಸಿದರು. ನಂತರ ದೇವಸ್ಥಾನ ಹೊರಗಡೆ ಬೃಹತ್ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ ಶುಭಾಶಯ ಕೋರಿದರು. 

ಇದನ್ನೂ ಓದಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ ಬಹುತೇಕ ಖಚಿತ: ಹುಟ್ಟೂರಿನಲ್ಲಿ ಸಂಭ್ರಮ

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.