ಬಿಜೆಪಿ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಸಿದ್ದರಾಮಯ್ಯ ಫೋಟೊ! -ವಿಡಿಯೋ - ಮಾಜಿ ಸಚಿವ ಕೆಎಸ್ ಈಶ್ವರಪ್ಪ
🎬 Watch Now: Feature Video
ಶಿವಮೊಗ್ಗ: ಭಾನುವಾರ ಇಲ್ಲಿ ನಡೆದ ನಗರ ಬಿಜೆಪಿ ಶಾಸಕ ಚನ್ನಬಸಪ್ಪ ಅವರ ಕಚೇರಿ ಉದ್ಘಾಟನಾ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಸಿಎಂ ಸಿದ್ದರಾಮಯ್ಯನವರ ಫೋಟೊ ಹಾಕಿರುವುದು ಅಚ್ಚರಿ ಮೂಡಿಸಿತು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಚೇರಿ ಉದ್ಘಾಟಿಸಿದರು. ವೇದಿಕೆ ಕಾರ್ಯಕ್ರಮಕ್ಕಾಗಿ ಬ್ಯಾನರ್ ಅಳವಡಿಸಿದ್ದು ಅದರಲ್ಲಿ ಬಿಜೆಪಿ ನಾಯಕರೊಂದಿಗೆ ಸಿಎಂ ಸಿದ್ದರಾಮಯ್ಯನವರ ಫೋಟೊ ಕೂಡಾ ಹಾಕಲಾಗಿದೆ.
ಬ್ಯಾನರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಜೊತೆಗೆ ಮೇಯರ್ ಫೋಟೋಗಳನ್ನು ಗಮನಿಸಬಹುದು.
ಬಿಜೆಪಿ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಸಿದ್ದರಾಮಯ್ಯನವರ ಫೋಟೊ ಬಳಕೆ ಚರ್ಚೆಗೆ ಗ್ರಾಸವಾಗಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಇನ್ನು, ಕಾಂಗ್ರೆಸ್ ರಾಜ್ಯದ ಜನರಿಗೆ ನೀಡಿರುವ ಗ್ಯಾರಂಟಿಗಳ ಶೀಘ್ರ ಜಾರಿಗೆ ಬಿಜೆಪಿ ಒತ್ತಾಯಿಸುತ್ತಿದ್ದು, ಟೀಕಾ ಸಮರ ನಡೆಸುತ್ತಿದೆ. ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಿದೆ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಸಾಮಾನ್ಯ ಪಾಸ್ಪೋರ್ಟ್ಗೆ ಅನುಮತಿ... ನಾಳೆ ಸಂಜೆ ಅಮೆರಿಕಕ್ಕೆ ರಾಹುಲ್ ಗಾಂಧಿ ಪಯಣ