ಸಿದ್ದರಾಮಯ್ಯಗೆ ಸಿಎಂ ಸ್ಥಾನ ಬಹುತೇಕ ಖಚಿತ.. ಅಭಿಮಾನಿಗಳು, ಬೆಂಬಲಿಗರಿಂದ ಸಂಭ್ರಮಾಚರಣೆ - karnataka next cm

🎬 Watch Now: Feature Video

thumbnail

By

Published : May 17, 2023, 1:22 PM IST

Updated : May 17, 2023, 1:40 PM IST

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಆಯ್ಕೆ ಆಗಲಿದ್ದಾರೆ ಎಂದು ಬಹುತೇಕ ಖಚಿತವಾದ ಬೆನ್ನಲ್ಲೇ ಅವರ ಬೆಂಬಲಿಗರು, ಅಭಿಮಾನಿಗಳು ಬೆಂಗಳೂರಿನಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಜಮಾಯಿಸಿದ ​ಕಾರ್ಯಕರ್ತರು ಬಡವರ ಬಂಧು ಸಿದ್ದರಾಮಯ್ಯ, ಅನ್ನರಾಮಯ್ಯಗೆ ಜೈ ಎಂದು ಸಿದ್ದರಾಮಯ್ಯ ಪರ ಘೋಷಣೆ ಕೂಗುವ ಮೂಲಕ ಹರ್ಷ ವ್ಯಕ್ತಪಡಿಸಿದರು.

ದೆಹಲಿಯಲ್ಲಿ 4 ದಿನಗಳಿಂದ ಹಲವು ಸುತ್ತಿನ ಸಭೆ, ಚರ್ಚೆಗಳ ಬಳಿಕ ಸಿದ್ದರಾಮಯ್ಯ ಅವರು ಮುಂದಿನ ಸಿಎಂ ಆಗಲಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ನಿವಾಸದಲ್ಲಿ ಮಂಗಳವಾರ ಇಡೀ ದಿನ ನಡೆದ ಸಿಎಂ ಆಯ್ಕೆ ವಿಚಾರದ ಬಗ್ಗೆ ಚರ್ಚೆ ಮಾಡಿ, ಈ ಹೊಣೆಯನ್ನು ಪಕ್ಷದ ನಾಯಕ ರಾಹುಲ್​ ಗಾಂಧಿ ಅವರಿಗೆ ನೀಡಲಾಗಿತ್ತು.

ರಾಹುಲ್​ ಗಾಂಧಿ ಅವರು ತಮ್ಮ ನಿವಾಸಕ್ಕೆ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಗಳಾದ ಡಿ ಕೆ ಶಿವಕುಮಾರ್​ ಮತ್ತು ಸಿದ್ದರಾಮಯ್ಯ ಅವರನ್ನು ಕರೆಯಿಸಿಕೊಂಡು ಮಾತುಕತೆ ನಡೆಸಿದರು. ಈ ಹಿನ್ನೆಲೆ ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿ ಎಂದು ಬಹುತೇಕ ಖಚಿತವಾಗಿದ್ದು, ಅಧಿಕೃತವಾಗಿ ಘೋಷಿಸುವುದು ಬಾಕಿ ಇದೆ. ಈ ಸುದ್ದಿ ತಿಳಿದು ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಸಿದ್ದರಾಮಯ್ಯ ಅವರ ಬೆಂಬಲಿಗರ ಖುಷಿ ಇಮ್ಮಡಿಯಾಗಿದೆ. 

ಇದನ್ನೂ ಓದಿ: ಕರ್ನಾಟಕಕ್ಕೆ ಯಾರು ಸಿಎಂ? ದೆಹಲಿಯಲ್ಲಿ ರಾಹುಲ್‌ ಭೇಟಿ ಮಾಡಿದ ಸಿದ್ದರಾಮಯ್ಯ

Last Updated : May 17, 2023, 1:40 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.