ಕೆಲವೊಬ್ಬರಿಗೆ ಬಿಜೆಪಿ ಅಧಿಕಾರಕ್ಕೆ ಬರೋದು ಬೇಡ ಅನಿಸುತ್ತಿದೆ: ಜಗದೀಶ್ ಶೆಟ್ಟರ್
🎬 Watch Now: Feature Video
ಹುಬ್ಬಳ್ಳಿ: ''ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಡ ತಂತ್ರ ಮಾಡುತ್ತಿದ್ದಾರೆ. ಜಿಲ್ಲಾಧ್ಯಕ್ಷರ ಮೂಲಕ ಒತ್ತಡ ತರುತ್ತಿದ್ದಾರೆ. ಆದರೆ, ಫ್ಲಡ್ ಗೇಟ್ ಓಪನ್ ಆದಂತಹ ಸ್ಥಿತಿ ಮುಂದೆ ಬರಲಿದೆ. ಚುನಾಯಿತ ಪ್ರತಿನಿಧಿಗಳಿಗೆ ರಾಜೀನಾಮೆ ಕೊಡೋದು ಬೇಡ ಅಂತ ಹೇಳಿದ್ದೇನೆ'' ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ''ನಾಮಪತ್ರ ಸಲ್ಲಿಕೆ ನಂತರ ಕ್ಷೇತ್ರದಾದ್ಯಂತ ಪ್ರಚಾರ ಮಾಡುತ್ತೇನೆ. ಕಾಂಗ್ರೆಸ್ನಲ್ಲಿ ಸರ್ವಾನುಮತದಿಂದ ನನ್ನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಕರೆದ ಕಡೆ ಕಾಂಗ್ರೆಸ್ ಪರ ಪ್ರಚಾರ ಮಾಡ್ತಿನಿ. ಬಿಜೆಪಿಯನ್ನು ಬೈದರೆ ಉದ್ಧಾರ ಆಗ್ತೇನಾ..? ಸಂದರ್ಭ ಬಂದಾಗ ಟೀಕೆ ಮಾಡೇ ಮಾಡ್ತಿನಿ'' ಎಂದರು.
''ನಾನೇನು ಹೋಗಿ ಜೈಲಿನಲ್ಲಿ ಇರಲೇ.? ಜನರನ್ನು ದೂರ ಇಟ್ಟು ಬಂಗ್ಲೆಯಲ್ಲಿ ಇರಲೇ.? ರಾಜ್ಯಸಭಾ ಸದಸ್ಯರಾಗೋದನ್ನು ತಿರಸ್ಕರಿಸಿದ್ದೇನೆ. ಚುನಾವಣಾ ರಾಜಕಾರಣದಿಂದ ನಿವೃತ್ತಿ ಹೊಂದುತ್ತೇನೆ ಅಂತ ಹೇಳಿಕೆ ಕೊಡಿ ಅಂದರು. ತಾವು ಕಳಿಸಿದ ಪತ್ರಕ್ಕೆ ಸಹಿ ಹಾಕಿ ಕಳಿಸುವಂತೆ ಹೇಳಿದ್ದರು. ಅವರು ಹೇಳಿದಂತೆ ಕೇಳಲು ನಾನೇನು ಹುಡುಗನೇ'' ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
''ಈ ಬಾರಿ ಅಧಿಕಾರಕ್ಕೆ ಬರೋಕೆ ಬಿಜೆಪಿಗೆ ಅವಕಾಶವಿತ್ತು. ಆದರೆ, ಕೆಲವೊಬ್ಬರಿಗೆ ಬಿಜೆಪಿ ಅಧಿಕಾರಕ್ಕೆ ಬರೋದು ಬೇಡ ಅನಿಸುತ್ತಿದೆ. ಹಾಗಾಗಿಯೇ ಪ್ರಮುಖ ನಾಯಕರ ವಿರುದ್ಧ ಷಡ್ಯಂತ್ರ ಮಾಡಿಕೊಂಡು ಬಂದಿದ್ದಾರೆ. ಕಳೆದ ಒಂದು ವರ್ಷದಿಂದಲೂ ಈ ಪಿತೂರಿ ನಡೆದಿದೆ'' ಎಂದು ಜಗದೀಶ್ ಶೆಟ್ಟರ್ ಕಿಡಿಕಾರಿದರು.
ಇದನ್ನೂ ಓದಿ: ಬಿಜೆಪಿ 3ನೇ ಪಟ್ಟಿ ರಿಲೀಸ್: ಜಗದೀಶ್ ಶೆಟ್ಟರ್ ವಿರುದ್ಧ ಟೆಂಗಿನಕಾಯಿ; ಮಹದೇವಪುರಕ್ಕೆ ಮಂಜುಳಾ ಲಿಂಬಾವಳಿ