ವಿಡಿಯೋ ಸಂದೇಶದ ಮೂಲಕ ರಾಜ್ಯದ ಜನತೆಗೆ ಧನ್ಯವಾದ ತಿಳಿಸಿದ ಸೋನಿಯಾ ಗಾಂಧಿ
🎬 Watch Now: Feature Video
ಬೆಂಗಳೂರು:ಕಾಂಗ್ರೆಸ್ ಪಕ್ಷವನ್ನು ಬಹುಮತದಿಂದ ಅಧಿಕಾರಕ್ಕೆ ತಂದಿರುವ ಮತದಾರರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಧನ್ಯವಾದ ಸಲ್ಲಿಸಿದ್ದಾರೆ. ಈ ಸಂಬಂಧ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ನಮಸ್ಕಾರ, ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ಬಹುಮತ ನೀಡಿರುವ ಕರ್ನಾಟಕ ರಾಜ್ಯದ ಜನತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಈ ಬಹುಮತ ಜನಪರ ಸರ್ಕಾರಕ್ಕಾಗಿ, ಈ ಬಹುಮತ ಬಡವರ ಪರವಾದ ಸರ್ಕಾರಕ್ಕಾಗಿ. ಇದು ವಿಭಜನೆ ರಾಜಕೀಯ ಹಾಗೂ ಭ್ರಷ್ಟಾಚಾರವನ್ನು ತಿರಸ್ಕರಿಸುವ ಜನಾದೇಶವಾಗಿದೆ ಎಂದಿದ್ದಾರೆ.
ಇಂದು ರಚನೆಯಾಗಿರುವ ಕಾಂಗ್ರೆಸ್ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದ್ದು, ಮೊದಲ ಸಚಿವ ಸಂಪುಟದಲ್ಲಿ ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿರುವುದು ಹೆಮ್ಮೆಯ ವಿಚಾರ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಹಾಗೂ ಪ್ರಗತಿ ಸಾಧಿಸಲು ಬದ್ಧವಾಗಿದೆ ಎಂದು ಹೇಳಿದ್ದಾರೆ. ಇಂದಿನ ಪದಗ್ರಹಣ ಸಮಾರಂಭದಲ್ಲಿ ಅವರು ಭಾಗಿಯಾಗಬೇಕಿತ್ತು. ಆದರೆ, ಕಡೆ ಕ್ಷಣಗಳಲ್ಲಿ ಅವರ ಕಾರ್ಯಕ್ರಮ ಬದಲಾದ ಹಿನ್ನೆಲೆ ಆಗಮಿಸಿರಲಿಲ್ಲ. ಐದು ವರ್ಷಗಳ ಬಳಿಕ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು ಮತ ನೀಡಿದ ರಾಜ್ಯದ ಜನತೆಗೆ ಅವರು ವಿಡಿಯೋ ಸಂದೇಶ ಬಿಡುಗಡೆ ಮಾಡಿ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ:24ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ: ಕಾರ್ಯಕ್ರಮದ ಅವಿಸ್ಮರಣಿಯ ಭಾವಚಿತ್ರಗಳಿಲ್ಲಿವೆ