'ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ'.. ವಿಶೇಷ ಪೂಜೆ ಸಲ್ಲಿಸಿದ ಕುರುಬ ಸಮುದಾಯ - ಸಿದ್ದರಾಮಯ್ಯ ಫೋಟೊ ಹಿಡಿದು ದೇವಾಲಯ ಸುತ್ತು
🎬 Watch Now: Feature Video
ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿದ್ದು, ಸಿಎಂ ಯಾರು ಎಂಬ ಚರ್ಚೆ ಶುರುವಾಗಿದೆ. ಒಂದೆಡೆ ಸಿಎಂ ಗಾದಿಗಾಗಿ ಸಿದ್ದರಾಮಯ್ಯ ಮತ್ತೊಂದೆಡೆ ಡಿ ಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಆದರೆ ದಾವಣಗೆರೆಯಲ್ಲಿ ಮಾತ್ರ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ ಎಂದು ಕುರುಬ ಸಮಾಜದಿಂದ ವಿಶೇಷ ಪೂಜೆ ಸಲ್ಲಿಸಲಾಗಿದೆ. ನಗರದ ಶಕ್ತಿ ದೇವತೆ ದುರ್ಗಾಂಬಿಕಾ ದೇವಿಗೆ ಪೂಜೆ ಸಲ್ಲಿಸಿ, ಸಿದ್ದರಾಮಯ್ಯ ಈ ಬಾರಿ ಮುಖ್ಯಮಂತ್ರಿ ಆಗಲಿ ಎಂದು ಅಭಿಮಾನಿಗಳು ಬೇಡಿಕೊಂಡಿದ್ದಾರೆ.
ಇದಲ್ಲದೆ ದುರ್ಗಾಂಬಿಕಾ ದೇವಿಯ ಪಕ್ಕ ಸಿದ್ದರಾಮಯ್ಯ ಫೋಟೋ ಇಟ್ಟು ವಿಶೇಷ ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಆವರಣದಲ್ಲಿ 101 ತೆಂಗಿನಕಾಯಿಗಳನ್ನು ಒಡೆದರು. ಎಲ್ಲಾ ಸಮುದಾಯದ ನಾಯಕ ಸಿದ್ದರಾಮಯ್ಯ ಅವರು ಈ ಹಿಂದೆ ಉತ್ತಮ ಆಡಳಿತ ನಡೆಸಿದ್ದಾರೆ. ಆದ್ದರಿಂದ ಮೊದಲ ಅವಧಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಲಿ, ಇಲ್ಲದಿದ್ದರೆ ಮುಂದಿನ ಬಾರಿ ಕುರುಬ ಸಮುದಾಯ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಕೆಯನ್ನೂ ರವಾನಿಸಿದ್ದಾರೆ.
ಸಿದ್ದರಾಮಯ್ಯ ಫೋಟೊ ಹಿಡಿದು ದೇವಾಲಯ ಸುತ್ತು ಹಾಕಿದ ಅಭಿಮಾನಿಗಳು: ದುರ್ಗಾಂಬಿಕಾ ದೇವಿಗೆ ಹರಕೆ ಕಟ್ಟಿಕೊಂಡರೆ ಈಡೇರುವ ಸಂಭವ ಹೆಚ್ಚಿದೆ. ಸಿದ್ದರಾಮಯ್ಯ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಇಡೀ ದೇವಾಲಯವನ್ನು ಸಿದ್ದರಾಮಯ್ಯ ಭಾವಚಿತ್ರ ಹಿಡಿದು ಮುಖ್ಯಮಂತ್ರಿ ಆಗಲಿ ಎಂದು ಸುತ್ತು ಹಾಕಿದ್ದಾರೆ. ದೇವಾಲಯ ಸುತ್ತು ಹಾಕಿದ ಬಳಿಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಘೋಷಣೆ ಕೂಗಿದರು.
ಇದನ್ನೂ ನೋಡಿ: ದೆಹಲಿಯತ್ತ ಸಿದ್ದರಾಮಯ್ಯ ಪ್ರಯಾಣ: ನಿಗದಿಯಾಗದ ಡಿ.ಕೆ.ಶಿವಕುಮಾರ್ ಪ್ರವಾಸ