ಹುಬ್ಬಳ್ಳಿ: ಹೆಚ್ಡಿಕೆ ಶೀಘ್ರ ಗುಣಮುಖರಾಗಲೆಂದು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ - ಈಟಿವಿ ಭಾರತ್ ಕನ್ನಡ ನ್ಯೂಸ್
🎬 Watch Now: Feature Video
Published : Sep 1, 2023, 10:07 PM IST
ಹುಬ್ಬಳ್ಳಿ : ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಜೆಡಿಎಸ್ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಬಳಿ ಇರುವ ಪತ್ತೆಶಾವಲಿ ದರ್ಗಾದಲ್ಲಿ ಇಂದು ಪ್ರಾರ್ಥನೆ ಸಲ್ಲಿಸಿದರು.
ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ದರ್ಗಾದಲ್ಲಿ ಚಾದರ ಹೊದಿಸುವ ಮೂಲಕ ಹೆಚ್ಡಿಕೆ ಶೀಘ್ರ ಗುಣಮುಖರಾಗಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವಂತಾಗಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪತ್ತೆಶಾವಲಿ ದರ್ಗಾದ ಗುರುಗಳು, ತಬರೇಜ್ ಸಂಶಿ, ಜಾಫರಸಾಬ ಕ್ಯಾಲಕೊಂಡ, ಜೆಡಿಎಸ್ ಮುಖಂಡರಾದ ಗಜಾನನ ಅಣ್ವೇಕರ, ಸಲೀಂ ಕುಡಚಿ ಸೇರಿದಂತೆ ಮೊದಲಾದ ಮುಖಂಡರು ಉಪಸ್ಥಿತರಿದರು.
ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿರುವ ಕುಮಾರಸ್ವಾಮಿಗೆ ಚಿಕಿತ್ಸೆ ಮುಂದುವರೆದಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಲವು ರಾಜಕೀಯ ನಾಯಕರು ಈಗಾಗಲೇ ಆಸ್ಪತ್ರೆಗೆ ಭೇಟಿ ನೀಡಿದ್ದು, ಹೆಚ್ಡಿಕೆ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ : ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರ: ಅಪೋಲೋ ಆಸ್ಪತ್ರೆ