ಮತ್ತೊಮ್ಮೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲೆಂದು ಕುರುಬ ಸಮಾಜದ ಮುಖಂಡರಿಂದ ವಿಶೇಷ ಪೂಜೆ - Special Puja by the leaders of Kuruba Samaj
🎬 Watch Now: Feature Video
ನೆಲಮಂಗಲ(ಬೆ.ಗ್ರಾ) : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿದೆ. ಈಗಾಗಲೇ ಮುಖ್ಯಮಂತ್ರಿ ಪಟ್ಟಕ್ಕಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಡಿ.ಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಎಂದು ಕುರುಬ ಸಮಾಜದ ಮುಖಂಡರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಂತರ ಮಾತನಾಡಿದ ಕುರುಬ ಸಮಾಜದ ಮುಖಂಡರು ಮೈಲಾರಲಿಂಗೇಶ್ವರ ದೇವರ ಕಾರ್ಣಿಕದಂತೆ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಅನೇಕ ಜನಪ್ರಿಯ ಕಾರ್ಯಕ್ರಮ ಜಾರಿಗೆ ತರುವ ಮೂಲಕ ಐದು ವರ್ಷಗಳ ಕಾಲ ಕಪ್ಪು ಚುಕ್ಕೆ ಇಲ್ಲದಂತೆ ಉತ್ತಮವಾಗಿ ಆಡಳಿತ ಮಾಡಿ ತೋರಿಸಿದ್ದಾರೆ. ಇದಿರಿಂದಾಗಿ ಈ ಬಾರಿಯೂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಮತ್ತೊಮ್ಮೆ ಹಿಂದುಳಿದ ವರ್ಗಗಳ ನಾಯಕನಾಗಿ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮ ನೀಡುವತ್ತ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಾರೆ ಎಂದರು.
ಇದನ್ನೂ ಓದಿ : ಕಾಂಗ್ರೆಸ್ ಸಿಎಂ ಆಯ್ಕೆಗಾಗಿ ಏಕಸಾಲಿನ ನಿರ್ಣಯ, ರಹಸ್ಯ ಮತದಾನ: ಬಿ ಕೆ ಹರಿಪ್ರಸಾದ್