ಸಚಿವರಾಗಿ ದಾವಣಗೆರೆಗೆ ಆಗಮಿಸಿದ ಎಸ್ಎಸ್ ಮಲ್ಲಿಕಾರ್ಜುನ್, ಭವ್ಯ ಸ್ವಾಗತ ಕೋರಿದ ಕೈ ಕಾರ್ಯಕರ್ತರು - kannada top news

🎬 Watch Now: Feature Video

thumbnail

By

Published : Jun 3, 2023, 8:50 PM IST

ದಾವಣಗೆರೆ: ದಾವಣಗೆರೆ ಉತ್ತರ ಕ್ಷೇತ್ರದಿಂದ ಆಯ್ಕೆಯಾಗಿ ಸಚಿವರಾದ ಬಳಿಕ ಮೊದಲ‌ ಬಾರಿಗೆ ದಾವಣಗೆರೆಗೆ ಆಗಮಿಸಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಗೂ ತೋಟಗಾರಿಕೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರಿಗೆ ದಾವಣಗೆರೆ ಹೊರವಲಯದ ಜಿಲ್ಲಾ ಪಂಚಾಯತ್ ಬಳಿ ಸಾವಿರಾರು ಕಾರ್ಯಕರ್ತರು ಸ್ವಾಗತ ಕೋರಿದರು.

ಬೆಂಗಳೂರಿನಿಂದ ನೇರವಾಗಿ ದಾವಣಗೆರೆಗೆ ಆಗಮಿಸಿದ ಸಚಿವ ಮಲ್ಲಿಕಾರ್ಜುನ್ ಅವರು ಮಾಜಿ ಮುಖ್ಯಮಂತ್ರಿ ದಿ. ಜೆ ಹೆಚ್ ಪಟೇಲ್ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ನಂತರ ತೆರೆದ ವಾಹನದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮೆರವಣಿಗೆ ಹೊರಟರು. ಹದಡಿ ರಸ್ತೆ, ನಿಟ್ಟುವಳ್ಳಿ, ಜಯದೇವ ವೃತ್ತ, ಅಂಬೇಡ್ಕರ್ ವೃತ್ತ, ಪಿಬಿ ರಸ್ತೆ, ಅರುಣ ವೃತ್ತ, ಮದಕರಿನಾಯಕ ವೃತ್ತ ತಲುಪಿ ಆಜಾದ್ ನಗರ ಬಳಿಕ ಅರಳಿ ಮರಕ್ಕೆ ಮೆರವಣಿಗೆ ಕೊನೆ ಮಾಡಲಾಯಿತು. 

ಮಲ್ಲಿಕಾರ್ಜುನ್​ ಅವರನ್ನು ಕಾಣಲು ಆಗಮಿಸಿದ್ದ ಸಾವಿರಾರು ಕಾರ್ಯಕರ್ತರು ನೂತನ ಸಚಿವರಿಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಇನ್ನು, ಕೆಲ ಅಭಿಮಾನಿಗಳು ಡಿಜೆ ಸದ್ದಿಗೆ ಸಖತ್ ಸ್ಟೆಪ್ ಹಾಕಿ ಕುಣಿದು ಕುಪ್ಪಳಿಸಿದರು.

ಇದನ್ನೂ ಓದಿ:ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಅದ್ಧೂರಿ ಚಾಲನೆ: 2.5 ಟನ್ ಭಾರದ ಕಲ್ಲು ಎಳೆಯುವ ಎತ್ತುಗಳು

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.