ಖೋಖೋ ಆಟದ ವೇಳೆ ಬಿದ್ದು ವಿದ್ಯಾರ್ಥಿ ಸಾವು : ದೃಶ್ಯ ಸಿಸಿಟಿವಿಯಲ್ಲಿ ಸೆರೆ - Student dies in Mysore
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/17-06-2023/640-480-18778229-thumbnail-16x9-yyy.jpg)
ಮೈಸೂರು : ಶಾಲಾ ಅವಧಿ ಮುಗಿದ ನಂತರ ಖೋಖೋ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಬಿದ್ದು ಅಸುನೀಗಿರುವ ಘಟನೆ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹರದನಹಳ್ಳಿ ಗ್ರಾಮದ ಎಚ್. ಎಸ್. ಪಾಪಣ್ಣ ಮತ್ತು ಕುಮಾರಿ ದಂಪತಿ ಪುತ್ರ ಶಶಾಂಕ್ (13) ಮೃತ ವಿದ್ಯಾರ್ಥಿಯಾಗಿದ್ದಾನೆ.
ವಿದ್ಯಾರ್ಥಿ ಶಶಾಂಕ್ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು. ಶುಕ್ರವಾರ ಸಂಜೆ ಶಾಲೆ ಮುಗಿದ ನಂತರ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳೆಲ್ಲ ಖೋಖೋ ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಶಶಾಂಕ್ ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿದೆ.
ಕೂಡಲೇ ಬಾಲಕನನ್ನು ಹೆಚ್. ಡಿ ಕೋಟೆ ತಾಲೂಕಿನ ಹಂಪಾಪುರ ಪ್ರಾಥಮಿಕ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವಿದ್ಯಾರ್ಥಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಶಾಲೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಘಟನೆಯ ದೃಶ್ಯ ಸೆರೆಯಾಗಿದೆ.
ಇದನ್ನೂ ಓದಿ : ಸಹೋದರನ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಲೇ ಯುವಕ ಸಾವು.. ವಿಡಿಯೋ ವೈರಲ್