ವರ್ಗಾವಣೆಗೊಂಡ ಪ್ರಾಂಶುಪಾಲರೇ ಬೇಕೆಂದು ಪಟ್ಟು ಹಿಡಿದ ವಿದ್ಯಾರ್ಥಿಗಳು - ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ
🎬 Watch Now: Feature Video
ಮೈಸೂರು: ಇಲ್ಲಿನ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವರ್ಗಾವಣೆಗೊಂಡ ಪ್ರಾಂಶುಪಾಲರೇ ಬೇಕೆಂದು ಪಟ್ಟು ಹಿಡಿದ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ಮಾಡಿ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರು ಎಂಬುವವರನ್ನು ಸರ್ಕಾರ ವರ್ಗಾವಣೆ ಮಾಡಿದ ಹಿನ್ನೆಲೆ ರೊಚ್ಚಿಗೆದ್ದ ವಿದ್ಯಾರ್ಥಿಗಳು ಬೆಳಗಿನ ಉಪಹಾರವನ್ನು ಸೇವಿಸದೇ ವಸತಿ ಶಾಲೆ ಮತ್ತು ಕಾಲೇಜಿನ ಗೇಟ್ ಮುಂಭಾಗದಲ್ಲಿ ಜಮಾಯಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಜಾನವಿ ಮಾತನಾಡಿ, ಏಳು ತಿಂಗಳ ಹಿಂದಷ್ಟೇ ಪ್ರಾಂಶುಪಾಲರಾಗಿ ಚಂದ್ರು ಅವರು ಬಂದಿದ್ದರು. ಆದರೆ, ಏಕಾಏಕಿ ಅವರನ್ನು ಬೇರೊಂದು ಕಾಲೇಜಿಗೆ ವರ್ಗಾವಣೆ ಮಾಡಿದ್ದಾರೆ. ಇದರಿಂದ ನಮಗೆ ತುಂಬಾ ನೋವುಂಟಾಗಿದೆ. ಶಾಲಾ ಮತ್ತು ಕಾಲೇಜಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಶಿಕ್ಷಣದಲ್ಲಿ ಪ್ರತಿಯೊಬ್ಬ ಮಕ್ಕಳಿಗೂ ಮಾರ್ಗದರ್ಶನ ನೀಡಿ ನಮಗೆ ದಾರಿ ದೀಪವಾಗಿದ್ದರು.
ಇಡೀ ಜಿಲ್ಲೆಯಲ್ಲಿ ತಗಡೂರು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜನ್ನು ಗುರುತಿಸುವಂತೆ ಮಾಡಿದ್ದಾರೆ ಹಾಗೂ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ಫಲಿತಾಂಶದಲ್ಲೂ ಕೂಡ ಉತ್ತಮ ಸಾಧನೆಯನ್ನು ಮಾಡಿದೆ. ಪರೀಕ್ಷೆಯ ಸಂದರ್ಭದಲ್ಲಿ ಅವರನ್ನು ವರ್ಗಾವಣೆ ಮಾಡಿರುವುದು ಅತ್ಯಂತ ಖಂಡನೀಯ. ಮತ್ತೆ ಪ್ರಾಂಶುಪಾಲರನ್ನು ನಮ್ಮ ಶಾಲೆಗೆ ಹಾಕಬೇಕು. ಇಲ್ಲವಾದಲ್ಲಿ ನಾವು ಪರೀಕ್ಷೆಯನ್ನು ಬರೆಯುವುದಿಲ್ಲ. ತರಗತಿಗಳಿಗೆ ಹೋಗುವುದಿಲ್ಲ, ಊಟ ತಿಂಡಿಯನ್ನು ಮಾಡುವುದಿಲ್ಲ ಎಂದು ಪಟ್ಟು ಹಿಡಿದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ : ಬರ್ಮುಡಾ ಧರಿಸಿ ರೇಣುಕಾಚಾರ್ಯ ಜಯಂತಿ ಆಚರಣೆ: ಸ್ವಾಮೀಜಿ ಕಾಲಿಗೆ ಬಿದ್ದ ಕಲಘಟಗಿ ತಹಶೀಲ್ದಾರ್