'ಮುಂದಿನ ಸಿಎಂ' ಎಂದು ಡಿಕೆಶಿ, ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳಿಂದ ಪೋಸ್ಟರ್- ವಿಡಿಯೋ - Siddaramaiah Chief Minister Banner
🎬 Watch Now: Feature Video
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದು ಮುಂದಿನ ಮುಖ್ಯಮಂತ್ರಿ ಆಯ್ಕೆ ಅಂತಿಮವಾಗುವ ಮುನ್ನವೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಮುಂದೆ 'ಮುಂದಿನ ಸಿಎಂ ಸಿದ್ದರಾಮಯ್ಯ' ಎಂದು ಪೋಸ್ಟರ್ ನಿಲ್ಲಿಸಲಾಗಿದೆ. ಸಿದ್ದರಾಮಯ್ಯನವರ ಬೆಂಗಳೂರಿನ ಸರ್ಕಾರಿ ನಿವಾಸದ ಗೇಟ್ ಮುಂಭಾಗ ಪೋಸ್ಟರ್ ಕಂಡುಬಂದಿದೆ. 2ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಎಂದು ತಿಳಿಸಿದ್ದು, ಕಾಂಗ್ರೆಸ್ ಯುವ ಮುಖಂಡ ಶಶಿಕುಮಾರ್ ಇದನ್ನು ಅಳವಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮುಂದೆಯೂ ಅವರ ಬೆಂಬಲಿಗರು 'ಮುಂದಿನ ಮುಖ್ಯಮಂತ್ರಿಗಳು' ಎಂದು ಪೋಸ್ಟರ್ ಹಾಕಿದ್ದಾರೆ. ಶನಿವಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಪ್ರಚಂಡ ಜಯಭೇರಿ ಬಾರಿಸಿದೆ. ಇನ್ನೊಂದೆಡೆ, ಬಿಜೆಪಿಗೆ ಮುಖಭಂಗವಾಗಿದೆ. ಇದೀಗ ಮುಂದಿನ ಸಿಎಂ ಯಾರು ಎಂಬ ಕುತೂಹಲ ರಾಜ್ಯದ ಜನರಲ್ಲಿ ಮನೆ ಮಾಡಿದೆ.
ಸಿಎಂ ಕುರ್ಚಿಗಾಗಿ ಸಿದ್ದು, ಡಿಕೆಶಿ ನಡುವೆ ಪೈಪೋಟಿ: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆ ಸಿಎಂ ಕುರ್ಚಿಗಾಗಿ ಪೈಪೋಟಿ ಇದೆ. ಈ ಹಿಂದೆ ಇಬ್ಬರೂ ಬಹಿರಂಗವಾಗಿಯೇ ಸಾಕಷ್ಟು ಬಾರಿ ಮುಖ್ಯಮಂತ್ರಿ ಆಸೆ ಹೇಳಿದ್ದರು.
ಇದನ್ನೂ ಓದಿ: ಚುನಾವಣೆಗೆ ಬರಲಾರೆ, ಪಕ್ಷ ಯಾರಿಗೆ ಟಿಕೆಟ್ ನೀಡುತ್ತೋ ಅವರ ಪರ ಕೆಲಸ ಮಾಡುವೆ: ರೇಣುಕಾಚಾರ್ಯ