ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಟಿ - 565 ಯುದ್ಧ ಟ್ಯಾಂಕ್!

By

Published : Dec 2, 2022, 4:21 PM IST

Updated : Feb 3, 2023, 8:34 PM IST

thumbnail
ಬೆಳ್ತಂಗಡಿ (ದಕ್ಷಿಣ ಕನ್ನಡ): ಇತ್ತೀಚೆಗೆ ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು. ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ. 1971ರ ಇಂಡೋ ಪಾಕ್ ಯುದ್ಧದಲ್ಲಿ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಈ ಯುದ್ಧ ಟ್ಯಾಂಕ್ ಬಳಕೆಯಾಗಿದೆ. 40 ಟನ್‍ಗಳಷ್ಟು ತೂಕ ಹೊಂದಿರುವ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲ ಹೊಂದಿದೆ. ಗರಿಷ್ಠ ವೇಗ - ಗಂಟೆಗೆ 51 ಕಿ.ಮೀ, ಸಾಮರ್ಥ್ಯ -500 ಅಶ್ವಶಕ್ತಿ ಇದೆ. 1968ರಲ್ಲಿ ಭಾರತೀಯ ಸೇನೆಗೆ ಇದನ್ನು ಸೇರಿಸಲಾಗಿದ್ದು, ಸೋವಿಯತ್ ಒಕ್ಕೂಟದ ಸಿಬ್ಬಂದಿ ಇದರ ತಯಾರಕರಾಗಿದ್ದಾರೆ.
Last Updated : Feb 3, 2023, 8:34 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.