ಕೊಪ್ಪಳ: ಅಕ್ರಮ ಮರಳು ದಂಧೆ ಖಂಡಿಸಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ - ಈಟಿವಿ ಭಾರತ್ ಕನ್ನಡ ನ್ಯೂಸ್
🎬 Watch Now: Feature Video
ಗಂಗಾವತಿ (ಕೊಪ್ಪಳ) : ಕನಕಗಿರಿ ತಾಲೂಕಿನ ಯತ್ನಟ್ಟಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ನಿಲ್ಲಿಸುವಂತೆ ಒತ್ತಾಯಿಸಿ ಇಂದು ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದರು. ಸರಕಾರಿ ಜಮೀನಿನಲ್ಲಿ ಮರಳು ದಂಧೆ ನಡೆಸುವವರನ್ನು ಮಹಿಳೆಯರೇ ಹಿಡಿದುಕೊಟ್ಟಿದ್ದಾರೆ. ಹೀಗಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇದೀಗ ಅದೇ ಸ್ಥಳದಲ್ಲಿ ಮತ್ತೆ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ಜನರು ದೂರಿದ್ದಾರೆ.
ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಅಧಿಕಾರಿಗಳ ಧೋರಣೆ ಖಂಡಿಸಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಇದಕ್ಕೂ ಮುನ್ನ ಮರಳು ದಂಧೆ ನಡೆಯುತ್ತಿದ್ದುದನ್ನು ಗ್ರಾಮದ ಜನರು ತಡೆದು ವಾಹನಗಳನ್ನು ಅಧಿಕಾರಿಗಳ ವಶಕ್ಕೆ ನೀಡಿದ್ದರು. ಒಂದೇ ದಿನದಲ್ಲಿ ಮತ್ತೆ ಅಕ್ರಮ ಮರಳು ಗಣಿಗಾರಿಕೆ ಮಾಡಲಾಗುತ್ತಿದ್ದು, ವಾಹನಗಳನ್ನು ತಡೆದು ಪ್ರಶ್ನಿಸಿದಾಗ ಇದ್ಲಾಪುರ ನಾಗರಾಜ್ ಮಲ್ಲಾಪುರ ಎಂಬ ವ್ಯಕ್ತಿ ಹಾಗೂ ಇತರರು ಸೇರಿ ದಂಧೆ ನಡೆಸುತ್ತಿರುವುದು ತಿಳಿದುಬಂದಿದೆ ಎನ್ನುವುದು ಗ್ರಾಮಸ್ಥರ ಆರೋಪ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ತಹಶೀಲ್ದಾರ್ ಸಂಜಯ್ ಕಾಂಬ್ಲೆ ಅವರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ : ಭೀಮಾತೀರದ ಹಂತಕನ ಹತ್ಯೆಗೆ ಯತ್ನಿಸಿದ್ದ ಪ್ರಮುಖ ಆರೋಪಿಗೆ ಷರತ್ತುಬದ್ಧ ಜಾಮೀನು