ಹಾವೇರಿ: ಪಟಾಕಿ ಗೋದಾಮಿನ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ - ಪಟಾಕಿ ಗೋದಾಮಿಗೆ ದಾಳಿ
🎬 Watch Now: Feature Video
Published : Oct 11, 2023, 9:18 AM IST
ಹಾವೇರಿ : ಅತ್ತಿಬೆಲೆ ಪಟಾಕಿ ದುರಂತ ಸಂಬಂಧ ಸಿಎಂ ಸಿದ್ದರಾಮಯ್ಯ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮದಲ್ಲಿ ಪಟಾಕಿ ಬಳಕೆ ನಿಷೇಧಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಹಾವೇರಿ ನಗರದಲ್ಲಿರುವ ಪಟಾಕಿ ಗೋದಾಮುಗಳ ಮೇಲೆ ದಾಳಿ ನಡೆಸಿದೆ. ಜನನಿಬಿಡ ಪ್ರದೇಶದಲ್ಲಿರುವ ಪಟಾಕಿ ಗೋದಾಮಿಗೆ ತಹಶೀಲ್ದಾರ್ ಶಂಕರ್ ಜಿ.ಎಸ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಲಿಂಗಪ್ಪ ಗಡಾದ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿ ಪಕ್ಕದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳನ್ನು ಸಂಗ್ರಹಿಸಿದ್ದ ಗೋದಾಮನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ. ಈ ಸಂಬಂಧ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಶನಿವಾರ ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣದಲ್ಲಿ 14 ಮಂದಿ ಸಾವನ್ನಪ್ಪಿ, 6 ಮಂದಿ ಗಂಭೀರ ಗಾಯಗೊಂಡಿದ್ದರು. ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಗ್ನಿ ಅವಘಡಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಸಿಎಂ ಹೇಳಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿ ವಹಿಸಿದ್ದರು. ಇದೀಗ ಘಟನೆ ಬೆನ್ನಲ್ಲೇ ರಾಜ್ಯಾದ್ಯಂತ ಹಸಿರು ಪಟಾಕಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ : ಮೆರವಣಿಗೆ, ಹಬ್ಬ, ಮದುವೆ ಸಮಾರಂಭಗಳಲ್ಲಿ ಪಟಾಕಿ ಸಿಡಿಸುವುದಕ್ಕೆ ನಿಷೇಧ, ಹಸಿರು ಪಟಾಕಿಗೆ ಅವಕಾಶ: ಸಿಎಂ