ಡಿಸಿಎಂ ಡಿಕೆಶಿ ಭೇಟಿಯಾದ ತೇಜಸ್ವಿ ಅನಂತಕುಮಾರ್: ’’ಅನಂತ ಕುಮಾರ್ 64’’ ಕಾರ್ಯಕ್ರಮಕ್ಕೆ ಆಹ್ವಾನ - ಈಟಿವಿ ಭಾರತ ಕನ್ನಡ
🎬 Watch Now: Feature Video
Published : Sep 4, 2023, 3:42 PM IST
ಬೆಂಗಳೂರು: ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಅವರ ಪತ್ನಿ ಹಾಗೂ ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕುಮಾರಕೃಪಾ ಅತಿಥಿ ಗೃಹದಲ್ಲಿ ಸೋಮವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಬಳಿಕ ಅನಂತಕುಮಾರ್ 64 ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ನೀಡಿದರು. ದಿವಂಗತ ಅನಂತಕುಮಾರ್ ಜನ್ಮ ಜಯಂತಿ ಪ್ರಯುಕ್ತ ಅದಮ್ಯ ಚೇತನ ಸಂಸ್ಥೆ ಕಾರ್ಯಕ್ರಮ ಆಯೋಜಿಸಿದೆ. ಈ ಸಂಬಂಧ ತೇಜಸ್ವಿ ಅನಂತ ಕುಮಾರ್ ಡಿಸಿಎಂ ಡಿಕೆಶಿಗೆ ಆಹ್ವಾನ ನೀಡಿದರು.
ಇದರ ಜೊತೆಗೆ ಅದಮ್ಯ ಚೇತನ ಸಂಸ್ಥೆಯಿಂದ ಇಂದಿರಾ ಕ್ಯಾಂಟೀನ್ ಹಾಗೂ ಪೌರಕಾರ್ಮಿಕರಿಗೆ ಊಟ ಪೂರೈಕೆ ಮಾಡಲಾಗಿತ್ತು. ಈ ಸಂಬಂಧ ಬಿಲ್ ಬಾಕಿ ಉಳಿದುಕೊಂಡಿದ್ದು, ಡಿಸಿಎಂ ಬಳಿ ಬಿಲ್ ಪಾವತಿ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಸುಮಾರು 45 ನಿಮಿಷಗಳ ಕಾಲ ಚರ್ಚೆ ನಡೆಸಿದ ತೇಜಸ್ವಿ ಅನಂತಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಸಮಾಲೋಚನೆಯಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿ: ಪ್ರಕರಣ ದಾಖಲು