ಚಿಕ್ಕಮಗಳೂರು; ಭೀಕರ ರಸ್ತೆ ಅಪಘಾತ, ಸಿಸಿಟಿವಿಯಲ್ಲಿ ದೃಶ್ಯ ಸೆರೆ - terrible road accident
🎬 Watch Now: Feature Video
Published : Jan 3, 2024, 6:56 PM IST
ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ವಾಕಿಂಗ್ ಮುಗಿಸಿಕೊಂಡು ತೆರಳುತ್ತಿದ್ದ ವ್ಯಕ್ತಿಗೆ ಬೈಕ್ವೊಂದು ಡಿಕ್ಕಿ ಹೊಡೆದಿದೆ. ಪಾದಚಾರಿಗೆ ದ್ವಿಚಕ್ರ ವಾಹನ ಗುದ್ದಿದ ರಭಸಕ್ಕೆ ಚಾಲಕ ಮೇಲೆ ಹಾರಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಬೈಕ್ ಸವಾರ ಹಾಗೂ ವಾಕಿಂಗ್ ಮುಗಿಸಿಕೊಂಡು ಹೋಗುತ್ತಿದ್ದ ಪಾದಚಾರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎದೆ ಝಲ್ ಎನಿಸುವಂತಿದೆ.
ವಾಕಿಂಗ್ ಮುಗಿಸಿಕೊಂಡು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ವೊಂದು ಡಿಕ್ಕಿ ಹೊಡೆದಿದ್ದು, ರಭಸಕ್ಕೆ ಬೈಕ್ ಸವಾರ, ಪಾದಚಾರಿ ತೀವ್ರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಮೂಡಿಗೆರೆ ಹೊರ ವಲಯದ ಬಿಳಗುಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬುಧವಾರ ಬೆಳಗಿನ ಜಾವ ವಾಕಿಂಗ್ ಮುಗಿಸಿ ರಸ್ತೆ ದಾಟುತ್ತಿದ್ದ ಸಮೀರ್ ಎಂಬಾತ ಅಪಘಾತಕ್ಕೊಳಗಾಗಿರುವ ವ್ಯಕ್ತಿ. ಮೂಡಿಗೆರೆಯಲ್ಲಿ ಮೆಡಿಕಲ್ಸ್ ನಡೆಸುತ್ತಿದ್ದ ಸಮೀರ್ ಕಾಲು ಮುರಿದಿದೆ. ಮುಖ, ಕೈ, ಕಾಲಿಗೆ ತೀವ್ರ ಪೆಟ್ಟಾಗಿದೆ. ಕೂಡಲೇ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರನಿಗೆ ಗಂಭೀರ ಗಾಯ ಆಗಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕುರಿತು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ: 12 ಮಂದಿ ಸಾವು, 30ಕ್ಕೂ ಹೆಚ್ಚು ಮಂದಿ ಗಂಭೀರ