ಹೊಸ ವರ್ಷಾಚರಣೆ.. ಘಾಟಿ ಸುಬ್ರಹ್ಮಣ್ಯ ದರ್ಶನ ಪಡೆದ ಸಾವಿರಾರು ಭಕ್ತರು - ಈಟಿವಿ ಭಾರತ ಕರ್ನಾಟಕ
🎬 Watch Now: Feature Video
ದೇವನಹಳ್ಳಿ: ಹೊಸ ವರ್ಷ ಹಿನ್ನೆಲೆ ಬೆಂಗಳೂರು ಹೊರವಲಯದ ಘಾಟಿ ಮತ್ತು ಮದುರೆ ದೇವಾಲಯಗಳಿಗೆ ಸಹಸ್ರರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಘಾಟಿ ಸುಬ್ರಹ್ಮಣ್ಯ ಹಾಗೂ ಮದುರೆ ಶನಿಮಹಾತ್ಮ ದೇವಾಲಯಗಳು ಬೆಳಗ್ಗೆಯಿಂದಲೂ ಭಕ್ತರಿಂದ ತುಂಬಿತ್ತು. ದೇವರ ದರ್ಶನ ಪಡೆದ ಭಕ್ತರು ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು. ಈ ವೇಳೆ ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು.
Last Updated : Feb 3, 2023, 8:38 PM IST