ಟಿಕೆಟ್ ಘೋಷಣೆಗೆ ಮುನ್ನವೇ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದ ಮತ ಪ್ರಚಾರ - Campaigned together by three BJP aspirants
🎬 Watch Now: Feature Video

ದಾವಣಗೆರೆ : ವಿಳಂಬ ಆಗುತ್ತಿರುವ ಟಿಕೆಟ್ ಘೋಷಣೆಯಿಂದ ಎಚ್ಚೆತ್ತುಕೊಂಡ ಜಿಲ್ಲೆಯ ಕಾಂಗ್ರೆಸ್ ಮತ್ತು ಬಿಜೆಪಿ ಆಕಾಂಕ್ಷಿಗಳು ಇಂದು ಮತ ಪ್ರಚಾರ ನಡೆಸಿದ್ದಾರೆ. ಟಿಕೆಟ್ ಘೋಷಣೆಗೂ ಮುನ್ನವೇ ಮೂವರು ಆಕಾಂಕ್ಷಿಗಳು ಒಟ್ಟಿಗೆ ಸೇರಿ ಪ್ರಚಾರ ಕಾರ್ಯ ಆರಂಭಿಸಿದ್ದು, ಕಾರ್ಯಕರ್ತರ ಹುಬ್ಬೇರಿಸಿತು. ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ ವಿಭಿನ್ನವಾಗಿ ಆಕಾಂಕ್ಷಿಗಳು ಒಂದೇ ಪ್ರಚಾರ ರಥದಲ್ಲಿ ಮತ ಯಾಚನೆ ಮಾಡಿದರು.
ಹರಿಹರ ಕ್ಷೇತ್ರದ ಆಕಾಂಕ್ಷಿಗಳಾದ ಮಾಜಿ ಶಾಸಕ ಬಿ.ಪಿ.ಹರೀಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ಹಾಗೂ ಚಂದ್ರಶೇಖರ ಪೂಜಾರ್ ಜಂಟಿ ಪ್ರಚಾರ ಮಾಡಿದ್ದಾರೆ. ಮೂವರಲ್ಲಿ ಒಬ್ಬರಿಗೆ ಟಿಕೆಟ್ ಲಭಿಸಲಿದ್ದು, ಪ್ರಚಾರಕ್ಕೆ ಕಡಿಮೆ ಸಮಯ ಸಿಗುವ ಕಾರಣಕ್ಕೆ ಪ್ರಚಾರ ಶುರು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೊಂದೆಡೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಹಿರಿಯಪುತ್ರ ಮಾಡಾಳ್ ಮಲ್ಲಿಕಾರ್ಜುನ್ ತಂದೆಯ ಅನುಪಸ್ಥಿತಿಯಲ್ಲಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಆರಂಭಿಸಿದರು. ಚನ್ನಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮಲ್ಲಿಕಾರ್ಜುನ್ಗೆ ಟಿಕೆಟ್ ಘೋಷಣೆಯಾಗದೇ ಇದ್ದರೂ ತಮಗೇ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಮತದಾರರಿಗೆ ಹೇಳುತ್ತಾ ಪ್ರಚಾರ ನಡೆಸುತ್ತಿದ್ದಾರೆ.
ಇದನ್ನೂ ಓದಿ : ನಾಳೆಯಿಂದ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ ಹೆಚ್.ಡಿ.ದೇವೇಗೌಡರು