ಸಾಲಾಗಿ ನಿಂತಿದ್ದ ಮೂರು ಕಾರುಗಳು ಸುಟ್ಟು ಭಸ್ಮ.. ವಿಡಿಯೋ - ಈಟಿವಿ ಭಾರತ ಕನ್ನಡ
🎬 Watch Now: Feature Video
ಗುಂಟೂರು (ಆಂಧ್ರಪ್ರದೇಶ) : ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಮೂರು ಕಾರುಗಳು ಬೆಂಕಿಗಾಹುತಿಯಾಗಿರುವ ಘಟನೆ ಗುಂಟೂರು ಜಿಲ್ಲೆಯ ಸ್ತಂಭಲಗರುವು ಪ್ರದೇಶದ ನರಸಿರೆಡ್ಡಿಪಾಲೆಂನಲ್ಲಿ ನಡೆದಿದೆ. ಕಾರಿನಲ್ಲಿ ಉಂಟಾದ ಆಂತರಿಕ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿರುವುದಾಗಿ ಹೇಳಲಾಗಿದೆ. ಬೆಂಕಿ ಕಾಣಿಸಿಕೊಂಡ ಕೆಲವೇ ನಿಮಿಷಗಳಲ್ಲಿ ಪಕ್ಕದಲ್ಲಿದ್ದ ಕಾರುಗಳಿಗೂ ಬೆಂಕಿಯ ಕೆನ್ನಾಲಿಗೆ ಹರಡಿದ್ದು, ಕೂಡಲೇ ಕಾರಿನ ಮಾಲೀಕರು ಅಗ್ನಿಶಾಮಕದಳದ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಬೆಂಕಿ ಅವಘಡಕ್ಕೆ ಮೂರು ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸುಮಾರು 50 ಲಕ್ಷ ರೂ ನಷ್ಟ ಉಂಟಾಗಿದೆ ಎಂದು ಮಾಲೀಕರು ತಿಳಿಸಿದ್ದಾರೆ. ಬೆಂಕಿ ಅವಘಡದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Last Updated : Feb 3, 2023, 8:29 PM IST