ಯಾದಗಿರಿ: ಕಲುಷಿತ ನೀರು ಸೇವಿಸಿ ಮೂವರು ಸಾವು - Etv Bharat Kannada
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/640-480-17772130-thumbnail-4x3-vny.jpg)
ಯಾದಗಿರಿ: ಜಿಲ್ಲೆಯ ಗಡಿ ಭಾಗದ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಜನರಿಗೆ ವಾಂತಿ, ಬೇಧಿ ಉಂಟಾಗಿದ್ದು, ಸಾವಿನ ಸಂಖ್ಯೆ 3ಕ್ಕೇರಿದೆ. ಈಗಾಗಲೇ 60ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಮಹಿಳೆಯೊಬ್ಬರು ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಸಾವಿತ್ರಮ್ಮ (35), ಸಾಯಮ್ಮ (70), ನರಸಮ್ಮ ಅನಪರ (71) ಮೃತಪಟ್ಟವರು. ಜೆಡಿಎಸ್ ನಿಯೋಜಿತ ಅಭ್ಯರ್ಥಿ ಶರಣಗೌಡ ಮೃತ ಕುಟುಂಬಗಳಿಗೆ ಅವರು ವೈಯುಕ್ತಿಕವಾಗಿ ತಲಾ 50 ಸಾವಿರ ರು. ಪರಿಹಾರಧನ ನೀಡಿ ಸಾಂತ್ವನ ಹೇಳಿದ್ದಾರೆ.
ಜಿಲ್ಲಾಧಿಕಾರಿ ಸ್ನೇಹಲ್ ಆರ್.ಮಾತನಾಡಿ, ಕಲುಷಿತ ನೀರಿನಿಂದ ಘಟನೆ ಜರುಗಿದೆ ಎಂದು ವರದಿಯಿಂದ ತಿಳಿದುಬಂದಿದೆ. ಈಗಾಗಲೇ ಚರಂಡಿ ಹಾಗೂ ಪೆಪ್‌ಲೈನ್ ಕಾಮಗಾರಿಯನ್ನು ವೀಕ್ಷಿಸಲಾಗಿದೆ. ಸ್ವಚ್ಛತೆ ಕಾಪಾಡಲು ಕ್ರಮ ವಹಿಸಲು ಸೂಚಿಸಿದ್ದೇನೆ ಎಂದರು.
ಇದನ್ನೂ ಓದಿ: ಕಲುಷಿತ ನೀರು ಸೇವನೆ: ಇಬ್ಬರು ಮೃತ, 34ಕ್ಕೂ ಹೆಚ್ಚು ಜನರು ಅಸ್ವಸ್ಥ