ದೇವರಾಯನದುರ್ಗ ಅರಣ್ಯ ಪ್ರದೇಶಕ್ಕೆ ಪ್ರವೇಶ ನಿರ್ಬಂಧ; ಭಕ್ತರ ಆಕ್ರೋಶ - ದೇವರಾಯನದುರ್ಗ ಅರಣ್ಯ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/01-01-2024/640-480-20401771-thumbnail-16x9-am.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Jan 1, 2024, 10:23 AM IST
ತುಮಕೂರು: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಪೈಕಿ ಒಂದಾಗಿರುವ ದೇವರಾಯನದುರ್ಗ ಅರಣ್ಯ ಪ್ರದೇಶಕ್ಕೆ ಹೊಸ ವರ್ಷದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪ್ರವೇಶ ನಿರ್ಬಂಧಿಸಿದೆ. ಪರ್ವತ ಶ್ರೇಣಿಯಲ್ಲಿರುವ ಶ್ರೀ ಭೋಗ ನರಸಿಂಹ ಸ್ವಾಮಿ ಹಾಗೂ ಯೋಗ ನರಸಿಂಹ ಸ್ವಾಮಿ ದೇವಸ್ಥಾನಗಳಿಗೂ ಭಕ್ತರು ಹೋಗಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಭಕ್ತ ಸಮೂಹ ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.
ದೇವರ ದರ್ಶನಕ್ಕಾಗಿ ಆಗಮಿಸಿದ ಭಕ್ತರಲ್ಲಿ ಸತ್ಯನಾರಾಯಣ ಎಂಬವರು 'ಈಟಿವಿ ಭಾರತ'ದ ಜತೆ ಮಾತನಾಡುತ್ತಾ ಜಿಲ್ಲಾಡಳಿತದ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿದರು. "ಇದು ಸರ್ವತಾ ಮಹಾಪರಾಧ. ಇದರಿಂದ ಭಕ್ತರಿಗೆ ಎಷ್ಟರ ಮಟ್ಟಿಗೆ ನೋವಾಗುತ್ತಿದೆ ಎಂಬುದು ನಿಮ್ಮ ಅರಿವಿಗೆ ಬರಲು ಸಾಧ್ಯವೇ ಇಲ್ಲ. ದೂರದ ಊರಿನಿಂದ ದೇವರ ದರ್ಶನಕ್ಕೆ ಬಂದವರು ಹಾಗೆಯೇ ಹಿಂತಿರುಗುತ್ತಿದ್ದಾರೆ. ಹೊಸ ವರ್ಷಾಚರಣೆಯನ್ನು ಬೆಂಗಳೂರಿನಂತಹ ನಗರಗಳಲ್ಲಿ ವಿಶೇಷ ಭದ್ರತೆ ಒದಗಿಸಿ ಮಾಡುತ್ತಿದ್ದೀರಿ. ಆದರೆ ಪವಿತ್ರ ಧಾರ್ಮಿಕ ಕ್ಷೇತ್ರಕ್ಕೆ ಬರಬೇಡಿ ಎಂದು ಹೇಳುತ್ತೀರಿ. ಇದು ಎಷ್ಟರ ಮಟ್ಟಿಗೆ ಸರಿ" ಎಂದು ಅವರು ಪ್ರಶ್ನಿಸಿದರು.
ಇದನ್ನೂ ಓದಿ: ದಾವಣಗೆರೆ: ಹೊಸ ವರ್ಷದ ಜೋಶ್, ಕುಣಿದು ಕುಪ್ಪಳಿಸಿದ ಯುವಜನತೆ