ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರ್ಯಾಲಿಗೆ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ಅನಾಹುತ - ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
🎬 Watch Now: Feature Video
ಅಥಣಿ(ಬೆಳಗಾವಿ): ಚಾಲಕನ ಸಮಯ ಪ್ರಜ್ಞೆಯಿಂದ ಬಾರಿ ಅಗ್ನಿ ಅವಘಡ ತಪ್ಪಿದಂತಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದಿಂದ ಉಗಾರ್ ಸಕ್ಕರೆ ಕಾರ್ಖಾನೆ ಕಬ್ಬು ಸಾಗಣೆಯಿಂದ ಸಮಯದಲ್ಲಿ ಕಾರ್ತಾಳ ಗ್ರಾಮದ ಹೊರವಲಯದಲ್ಲಿ ಆಕಸ್ಮಿಕವಾಗಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರ್ಯಾಲಿಗೆ ಬೆಂಕಿ ತಗುಲಿದೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲ ಕಾಲ ಆತಂಕಕ್ಕೆ ಕಾರಣವಾಯಿತು. ಚಾಲಕ ಬಯಲು ಪ್ರದೇಶದಲ್ಲಿ ಬೆಂಕಿ ತಗುಲಿದ ಟ್ರ್ಯಾಲಿ ಕೆಳಗೆ ಕೆಡವಿ ರಕ್ಷಣೆ ಮಾಡಿಕೊಂಡಿದ್ದಾನೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯ ನಡೆದ ಘಟನೆ.
Last Updated : Feb 3, 2023, 8:33 PM IST