ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಿದ ಟ್ರಾಫಿಕ್ ಪೊಲೀಸರು.. ವಿಡಿಯೋ ವೈರಲ್ - ಈಟಿವಿ ಭಾರತ್ ಕನ್ನಡ ನ್ಯೂಸ್
🎬 Watch Now: Feature Video
ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಿಟ್ಟು ಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ನಗರದ ರಸ್ತೆಗಳಲ್ಲಿ ತಗ್ಗು-ಗುಂಡಿಗಳು ಬಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ. ಇದನ್ನು ಗಮನಿಸಿದ ಟ್ರಾಫಿಕ್ ಪೊಲೀಸರು ಸ್ವತಃ ಗುಂಡಿಗಳಿಗೆ ಕಲ್ಲುಗಳನ್ನು ಹಾಕಿ ಮುಚ್ಚುವ ಮೂಲಕ ಸಾಮಾಜಿಕ ಕಾಳಜಿ ತೋರಿದ್ದಾರೆ. ನಗರದ ಗೋಕುಲ್ ರಸ್ತೆಯ ಹೊಸೂರು ಡಿಪೋ ಬಳಿಯ ಸುಚಿರಾಯು ಆಸ್ಪತ್ರೆಗೆ ಹೋಗುವ ಕ್ರಾಸ್ನಲ್ಲಿ ಪೊಲೀಸರೇ ರಸ್ತೆ ಗುಂಡಿಗಳನ್ನು ಮುಚ್ಚಿತ್ತಿರುವ ದೃಶ್ಯವನ್ನು ಸಾರ್ವಜನಿಕರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಅವಳಿ ನಗರದ್ಯಾಂತ ರಸ್ತೆ-ಗುಂಡಿಗಳು ಸಾಕಷ್ಟು ಇದ್ದು, ಹು-ಧಾ ಮಹಾನಗರ ಪಾಲಿಕೆ ಅಥವಾ ಸಂಬಂಧಿಸಿದ ಅಧಿಕಾರಿಗಳು ನಮಗೂ ರಸ್ತೆಗೂ ಯಾವುದೇ ಸಂಬಂಧವಿಲ್ಲ ಎಂಬ ನಿಷ್ಕಾಳಜಿ ಧೋರಣೆ ತೋರುತ್ತಿದ್ದರೆ, ಇತ್ತ ಪೊಲೀಸರೇ ತಮ್ಮ ಕೆಲಸದ ಒತ್ತಡದ ಮಧ್ಯೆ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಮುಂದಾಗಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಇದನ್ನೂ ಓದಿ : ಬಾಗಲಕೋಟೆ: ಅವ್ಯವಸ್ಥೆಗೆ ಖಂಡನೆ.. ದುರಸ್ತಿಗೆ ಒತ್ತಾಯಿಸಿ ಗುಂಡಿ ಬಿದ್ದ ದಾರಿಯಲ್ಲೇ ವ್ಯಕ್ತಿ ಉರುಳು ಸೇವೆ.. ಅಧಿಕಾರಿಗಳ ವಿರುದ್ಧ ಆಕ್ರೋಶ