ಕರ್ಕಶ ಶಬ್ದ ಮಾಡಿಕೊಂಡು ಓಡಾಡುತ್ತಿದ್ದ ಯುವಕರ 10ಕ್ಕೂ ಹೆಚ್ಚು ಬೈಕ್ ವಶಕ್ಕೆ ಪಡೆದ ಪೊಲೀಸರು - ಸಾರ್ವಜನಿಕರಿಗೆ ಕಿರಿಕಿರಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/16-08-2023/640-480-19275261-thumbnail-16x9-ck.jpg)
ಧಾರವಾಡ: ಸ್ವಾತಂತ್ರ್ಯೋತ್ಸವದ ಹೆಸರಿನಲ್ಲಿ ಕರ್ಕಶ ಶಬ್ದ ಮಾಡಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಯುವಕರ ಹತ್ತಕ್ಕೂ ಹೆಚ್ಚು ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ಕಶ ಶಬ್ದದ ಸೈಲೆನ್ಸರ್ ಹಾಕಿಕೊಂಡು ಓಡಾಟ ಮಾಡುತ್ತಿರುವುದನ್ನು ಗಮನಿಸಿದ ಪೊಲೀಸರು ಯುವಕರಿಗೆ ಬಿಸಿ ಮುಟ್ಟಿಸಿದ್ದಾರೆ.
ಧಾರವಾಡದ ಪ್ರಮುಖ ಬೀದಿಗಳಲ್ಲಿ ಬೇಕಾಬಿಟ್ಟಿಯಾಗಿ ಯುವಕರು ಬೈಕ್ ರ‍್ಯಾಲಿ ಮಾಡುತ್ತಿದ್ದರು. ಸ್ವಾತಂತ್ರ್ಯೋತ್ಸವದ ಹೆಸರಿನಲ್ಲಿ ನಿಯಮ ಮೀರಿ ಓಡಾಟ ನಡೆಸಿದ್ದಲ್ಲದೇ, ಕರ್ಕಶ ಶಬ್ದ ಮಾಡುವ ಸೈಲೆನ್ಸರ್ಗಳನ್ನು ಬೈಕ್ಗಳಿಗೆ ಅಳವಡಿಸಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದರು. ಸದ್ಯ ಹೀಗೆ ಬೇಕಾಬಿಟ್ಟಿಯಾಗಿ ಬೈಕ್ ಓಡಿಸುತ್ತಿದ್ದ ಯುವಕರಿಗೆ ಖಾಕಿ ಶಾಕ್ ಕೊಟ್ಟಿದೆ. ಇದನ್ನೆಲ್ಲ ಗಮನಿಸಿದ ಧಾರವಾಡ ಸಂಚಾರ ಠಾಣೆ ಪೊಲೀಸರು ಅಂತಹ ಬೈಕ್ ಹಾಗೂ ಯುವಕರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ನಿಯಮ ಮೀರಿ ಓಡಾಡುತ್ತಿದ್ದ ಬೈಕ್‌ಗಳನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ತಂದು ನಿಲ್ಲಿಸಿದ್ದಾರೆ.
ಇದನ್ನೂ ಓದಿ: ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಗೆ ಬೈಕ್ ಡಿಕ್ಕಿ: ಚಿಕಿತ್ಸೆ ಫಲಿಸದೆ ಸಾವು
ಸೈಲೆನ್ಸರ್ ತೆಗೆಸಿ ಸವಾರರಿಗೆ ಪೊಲೀಸರಿಂದ ಕ್ಲಾಸ್: ಇನ್ನು ದಾವಣಗೆರೆ ಜಿಲ್ಲೆಯ ಹರಿಹರ ನಗರ ಠಾಣೆ ಪೊಲೀಸರು ಕರ್ಕಶ ಶಬ್ದ ಮಾಡುವ ರಾಯಲ್ ಎನ್ಫೀಲ್ಡ್ ದ್ವಿಚಕ್ರ ವಾಹನದ ಸೈಲೆನ್ಸರ್ ತೆಗೆಸಿ, ಟೈರ್ನ ಗಾಳಿ ತೆಗೆದು ವಾಹನ ಸವಾರರಿಗೆ ಪಾಠ ಕಲಿಸಿದ್ದರು.