ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕ್ಯಾಂಟರ್ಗೆ ಬೈಕ್ ಡಿಕ್ಕಿ: ಯುವಕ, ಯುವತಿ ಸಾವು - ರಸ್ತೆಯಲ್ಲೇ ಕೆಟ್ಟು ನಿಂತಿದ್ದ ಕ್ಯಾಂಟರ್
🎬 Watch Now: Feature Video
ದೇವನಹಳ್ಳಿ: ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕ್ಯಾಂಟರ್ಗೆ ಹಿಂಬದಿಯಿಂದ ಬಂದು ರಾಯಲ್ ಎನ್‌ಫೀಲ್ಡ್ ಬೈಕ್ ಡಿಕ್ಕಿ ಹೊಡೆದು ಯುವಕ, ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7 ರ ಆವತಿ ಬಳಿ ಇಂದು ಘಟನೆ ನಡೆಯಿತು. ಮೃತ ಯುವಕನನ್ನು ಬೆಂಗಳೂರು ಮೂಲದ ಭರತ್ ಎಂದು ಗುರುತಿಸಲಾಗಿದೆ. ಯುವತಿಯ ಹೆಸರು, ವಿಳಾಸ ಪತ್ತೆಯಾಗಿಲ್ಲ.
ಚಿಕ್ಕಬಳ್ಳಾಪುರ ಕಡೆಯಿಂದ ವೇಗವಾಗಿ ಬರುತ್ತಿದ್ದ ಬೈಕ್ ರಸ್ತೆಯಲ್ಲೇ ನಿಂತಿದ್ದ ಕ್ಯಾಂಟರ್ಗೆ ಗುದ್ದಿದೆ. ರಭಸಕ್ಕೆ ರಸ್ತೆಗೆ ಬಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಮಂಡ್ಯ: ಬೈಕ್ ಮೇಲೆ ಮರ ಬಿದ್ದು ಪೌರಕಾರ್ಮಿಕ ಸಾವು