ಚಲಿಸುತ್ತಿದ್ದ ಬೈಕ್ ಮೇಲೆ ಮರದ ಕೊಂಬೆ ಬಿದ್ದು ಇಬ್ಬರಿಗೆ ಗಾಯ: ವಿಡಿಯೋ - ಈಟಿವಿ ಭಾರತ ಕನ್ನಡ
🎬 Watch Now: Feature Video
ಬೆಂಗಳೂರು: ರಸ್ತೆಯ ಪಕ್ಕದಲ್ಲಿದ್ದ ಮರದ ದೊಡ್ಡ ಕೊಂಬೆ ಮುರಿದು ಬಿದ್ದು ಇಬ್ಬರು ಬೈಕ್ ಸವಾರರು ತೀವ್ರವಾಗಿ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ. ಗಾಯಾಳು ಮೀನಾಕ್ಷಿ ಹಾಗು ಇನ್ನೋರ್ವ ವ್ಯಕ್ತಿ ಇಎಸ್ಐ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ನಗರದ ಅನೇಕ ಕಡೆಗಳಲ್ಲಿ ಸಮಸ್ಯೆಗಳು ಉಂಟಾಗುತ್ತಿವೆ. ಬಸವನಗುಡಿಯ ಶ್ರೀನಗರದ ಜಲಗೇರಮ್ಮ ದೇವಸ್ಥಾನದ ಎದುರುಗಡೆ ಇರುವ ಅಳವಳ್ಳಿ ಮುಖ್ಯರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಜನ ಸಂಚರಿಸುತ್ತಾರೆ. ಚುನಾವಣಾ ಪ್ರಚಾರದ ರೋಡ್ ಶೋಗಾಗಿ ರಸ್ತೆಯ ಅಕ್ಕಪಕ್ಕದ ಸುಮಾರು ಎರಡು ಕಿಲೋಮೀಟರ್ ಉದ್ದ ಮರದ ಕೊಂಬೆಗಳನ್ನು ಕತ್ತರಿಸಲಾಗಿತ್ತು. ಮಳೆಗಾಲ ಸಮೀಪಿಸುತ್ತಿರುವುದರಿಂದ ರಸ್ತೆಯ ಅಕ್ಕಪಕ್ಕದಲ್ಲಿರುವ ಇಂತಹ ದುರ್ಬಲ ಮರಗಳ ಕೊಂಬೆಗಳನ್ನು ಕತ್ತರಿಸಬೇಕು. ಇಲ್ಲದಿದ್ದರೆ ಜನರಿಗೆ ತೊಂದರೆಯಾಗುತ್ತದೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಈ ಕುರಿತು ಗಮನಹರಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಬೇಕಾಗಿದೆ. ಇಂತಹ ಅವಘಡಗಳಿಗೆ ಅಧಿಕಾರಿಗಳ ಬೇಜವಾಬ್ದಾರಿತನ ಕಾರಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮನೆ ಕುಸಿತ, ಕಾರ್ಗಳು ಜಖಂ..