ತಿರುವಿನಲ್ಲಿ ಕಾರಿನ ಮೇಲೆ ಲಾರಿ ಪಲ್ಟಿ: ಮಗು ಸೇರಿ ನಾಲ್ವರು ಸಾವು, ವೃದ್ಧೆ ಪಾರು - ಲಾರಿ ಪಲ್ಟಿ
🎬 Watch Now: Feature Video
Published : Jan 5, 2024, 9:04 AM IST
ದಂಗ್ (ಗುಜರಾತ್): ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಜರಾತ್ನ ಡ್ಯಾಂಗ್ ಜಿಲ್ಲೆಯ ಸಪುತಾರಾ ಘಾಟ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.
ಘಟನೆ ಬಗ್ಗೆ ಡ್ಯಾಂಗ್ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಿ.ಪಾಟೀಲ್ ಅವರು ಮಾಹಿತಿ ನೀಡಿದ್ದು, ರಸ್ತೆಯ ಎರಡನೇ ತಿರುವಿನ ಬಳಿ ಲಾರಿ ಪಲ್ಟಿಯಾಗಿ ಕಾರು ನಜ್ಜುಗುಜ್ಜಾಗಿದೆ. ಅದರಲ್ಲಿ ಮೂವರು ಮಹಿಳೆಯರು, ಬಾಲಕಿ ಹಾಗೂ ಓರ್ವ ಪುರುಷ ಸೇರಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ವೃದ್ಧೆಯನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಎರಡು ಜೆಸಿಬಿ ಹಾಗೂ ಕ್ರೇನ್ ಮೂಲಕ ಕಾರನ್ನು ಲಾರಿ ಅಡಿಯಿಂದ ಹೊರ ತೆಗೆಯಲಾಗಿದೆ. ರಾಮನಾಬೆನ್ ಠಾಕೂರ್, ಅಮಿತ್ಕುಮಾರ್ ರಜಪೂತ್ ಮತ್ತು ಅವರ ಪತ್ನಿ ಪ್ರಿಯಾಂಕಾ ಹಾಗೂ 2 ವರ್ಷದ ಮಗು ಅನಯ ಅಮಿತ್ ಕುಮಾರ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೃದ್ಧೆ ಮೀರಾಬೆನ್ ರಾಮಾಶ್ರಯ್ ಠಾಕೂರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೃದ್ಧೆಯ ಸ್ಥಿತಿ ಸ್ಥಿರವಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಹಾಸನದಲ್ಲಿ ಸಾರಿಗೆ ಬಸ್ ಪಲ್ಟಿ: 10ಕ್ಕೂ ಹೆಚ್ಚು ಮಂದಿಗೆ ಗಾಯ