ತುಮಕೂರು ರಸ್ತೆಯಲ್ಲಿ ಭಯಾನಕ ರಸ್ತೆ ಅಪಘಾತ, ಮೂವರು ಗಂಭೀರ- ಸಿಸಿಟಿವಿ ದೃಶ್ಯ - ತುಮಕೂರು ರಸ್ತೆ ಅಪಘಾತ
🎬 Watch Now: Feature Video
Published : Aug 30, 2023, 10:36 PM IST
ತುಮಕೂರು: ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಸಂಚರಿಸುತ್ತಿದ್ದ ಬೈಕ್ಗೆ ಕಾರು ಡಿಕ್ಕಿಯಾಗಿ ಬೈಕ್ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ನಗರದ ಕ್ಯಾತಸಂದ್ರ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು (ಬುಧವಾರ) ನಡೆದಿದೆ.
ವೃತ್ತದ ಸಮೀಪ ಬೈಕ್ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಮತ್ತೊಂದು ಬದಿಗೆ ತೆರಳಲು ರಸ್ತೆ ಕ್ರಾಸ್ ಮಾಡುತ್ತಿದ್ದಾಗ ವೇಗವಾಗಿ ಬಂದ ಇನೋವಾ ಕಾರು, ಬೈಕ್ಗೆ ಡಿಕ್ಕಿ ಹೊಡೆಯಿತು. ಅಪಘಾತದ ರಭಸಕ್ಕೆ ಬೈಕ್ನಲ್ಲಿದ್ದ ಮೂವರು ಹಾರಿಬಿದ್ದಿದ್ದಾರೆ.
ಕ್ಯಾತಸಂದ್ರದ ಸಂತೋಷ್, ನಾಗೇಶ್, ವಿಜಯ್ ಕುಮಾರ್ ಎಂಬವರಿಗೆ ಗಂಭೀರ ಗಾಯಗಳಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ಗೆ ದಾಖಲಿಸಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ದೃಶ್ಯದಲ್ಲಿ, ಇನೋವಾ ಕಾರು ರಸ್ತೆ ಕ್ರಾಸ್ ಮಾಡುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆಯುತ್ತದೆ. ಈ ಸಂದರ್ಭದಲ್ಲಿ ಮೂವರು ಎತ್ತರಕ್ಕೆ ಹಾರಿಬಿದ್ದಿರುವ ಭಯಾನಕ ದೃಶ್ಯ ಸೆರೆಯಾಗಿದೆ. ಈ ಸಂಬಂಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಎಸಗಿದ ಕಾರು ಚಾಲಕ ಹಾಗೂ ಕಾರನ್ನು ವಶಕ್ಕೆ ಪಡೆದ ಕ್ಯಾತಸಂದ್ರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ಕಂಟೈನರ್‌ನಡಿ ಮಲಗಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ