ಪ್ರತಿಷ್ಠಿತ ಕಾಲೇಜಿನ ಬಳಿ ಗಾಂಜಾ ಮಾರಾಟ: ಆನೇಕಲ್‌ನಲ್ಲಿ ಇಬ್ಬರ ಬಂಧನ - ಆರೋಪಿಗಳ ಬಂಧನ
🎬 Watch Now: Feature Video
ಆನೇಕಲ್: ಪ್ರತಿಷ್ಠಿತ ಕಾಲೇಜಿನ ಸಮೀಪದಲ್ಲಿ ಮಾದಕ ದ್ರವ್ಯ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಆನೇಕಲ್ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಸೋಮಶೇಖರ್ ಹಾಗೂ ರಾಘವೇಂದ್ರ ಬಂಧಿತರು. ಬೇಗ ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಗಾಂಜಾ ತಂದು ಸಣ್ಣ ಸಣ್ಣ ಪ್ಯಾಕೆಟ್ಗಳನ್ನಾಗಿ ಮಾಡಿ ಪಟ್ಟಣಕ್ಕೆ ಸಮೀಪವಿರುವ ಕಾಲೇಜಿನ ಬಳಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಾಲೇಜು ವಿದ್ಯಾರ್ಥಿಗಳನ್ನೇ ಗುರಿ ಮಾಡಿಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಆನೇಕಲ್ ಪೊಲೀಸರು ದಾಳಿ ನಡೆಸಿದ್ದಾರೆ. ಪಟ್ಟಣದ ಅಯೋಧ್ಯೆ ನಗರದ ಮನೆಯೊಂದರಲ್ಲಿ ಮಾದಕ ದ್ರವ್ಯ ಸಂಗ್ರಹ ಮಾಡಿರುವುದು ತಿಳಿಯುತ್ತಿದ್ದಂತೆ ತಹಶೀಲ್ದಾರ್ ಶಿವಪ್ಪ ಲಮಾಣಿ ನೇತೃತ್ವದಲ್ಲಿ ಪೊಲೀಸರು ಮನೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 15 ಲಕ್ಷ ರೂ. ಮೌಲ್ಯದ 25 ಕೆ.ಜಿ ಗಾಂಜಾ ಪತ್ತೆಯಾಗಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್(ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್) ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಆಂಧ್ರದಿಂದ ತಂದು ಬೆಂಗಳೂರಿನಲ್ಲಿ ಮಾರಾಟ: 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ವಶ