ಹರಿಯಾಣ: ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ 2 ಮೃತದೇಹಗಳು ಪತ್ತೆ - ಭಿವಾನಿ ಜಿಲ್ಲೆಯ ಲೋಹರು ಪ್ರದೇಶ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/640-480-17775726-thumbnail-4x3-news.jpg)
ಭಿವಾನಿ (ಹರಿಯಾಣ): ಭಿವಾನಿ ಜಿಲ್ಲೆಯ ಲೋಹರು ಪ್ರದೇಶದ ಬಾರ್ವಾಸ್ ಗ್ರಾಮದಲ್ಲಿ ಗುರುವಾರ ಮುಂಜಾನೆ 8 ಗಂಟೆ ಸುಮಾರಿಗೆ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸುಟ್ಟು ಕರಕಲಾಗಿರಬಹುದು ಎಂದು ಶಂಕಿಸಲಾಗಿದೆ.
ಕಾರಿನ ನಂಬರ್ ಪ್ಲೇಟ್ ಹಾಗೂ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ನಾವು ಚಾಸೀಸ್ ನಂಬರ್ ಮೂಲಕ ವಾಹನವನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ. ಇದರಿಂದ ಕಾರಿನ ಮಾಲೀಕರನ್ನು ಪತ್ತೆಹಚ್ಚಬಹುದು. ಸುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಎಫ್ಎಸ್ಎಲ್ ಮತ್ತು ಇತರ ಏಜೆನ್ಸಿಗಳ ತಾಂತ್ರಿಕ ತಂಡದ ಸಹಾಯದಿಂದ ಎಲ್ಲ ಆಯಾಮದಲ್ಲಿಯೂ ತನಿಖೆ ಮಾಡಲಾಗುತ್ತಿದೆ ಎಂದು ಡಿಎಸ್ಪಿ ಜಗತ್ ಸಿಂಗ್ ಮೋರೆ ತಿಳಿಸಿದ್ದಾರೆ.
ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ : ಕೊಲೆ ಶಂಕೆ