ಮಾದಪ್ಪನ ಬೆಟ್ಟದಲ್ಲಿ ಅದ್ಧೂರಿ ಯುಗಾದಿ ರಥೋತ್ಸವ: ನೋಡಿ ವೈಮಾನಿಕ ದೃಶ್ಯ! - ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ
🎬 Watch Now: Feature Video
ಚಾಮರಾಜನಗರ: ನಾಡಿನ ಪ್ರಸಿದ್ಧ ಯಾತ್ರಾಸ್ಥಳ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಯುಗಾದಿ ರಥೋತ್ಸವ ಅದ್ದೂರಿಯಾಗಿ ನೆರವೇರಿತು. ಲಕ್ಷಾಂತರ ಭಕ್ತರು ಮಹದೇವನಿಗೆ ಜೈಕಾರ ಹಾಕಿ ಪ್ರಾರ್ಥಿಸಿದರು. ಅಪಾರ ಸಂಖ್ಯೆಯ ಭಕ್ತರು ಕಾಲ್ನಡಿಗೆಯ ಮೂಲಕ ಶ್ರೀಕ್ಷೇತ್ರಕ್ಕೆ ಆಗಮಿಸಿದ್ದಾರೆ. ಈ ಬಾರಿ ಮಹದೇಶ್ವರನ 108 ಅಡಿ ಎತ್ತರದ ಪ್ರತಿಮೆ ಕ್ಷೇತ್ರದ ಹೊಸ ಆಕರ್ಷಣೆ. ರಥೋತ್ಸವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
5 ದಿನದಲ್ಲಿ 12 ಲಕ್ಷ ಭಕ್ತರ ಭೇಟಿ: ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಪ್ರಯುಕ್ತ ಭಕ್ತಸಾಗರವೇ ಹರಿದು ಬಂದಿತ್ತು. ಇದರಿಂದಾಗಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯವೂ ದೊರೆತಿದೆ. ಫೆ.17 ರಿಂದ 21 ರವರೆಗೆ ಮಹಾಶಿವರಾತ್ರಿ ಹಬ್ಬ ಆಚರಣೆ ನಡೆದಿದ್ದು 12 ಲಕ್ಷ ಮಂದಿ ಈ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ. ವಿವಿಧ ಉತ್ಸವ, ಲಾಡು ಪ್ರಸಾದ ಹಾಗೂ ಇನ್ನಿತರ ಸೇವೆಗಳನ್ನು ಭಕ್ತರು ನಡೆಸಿದ್ದು ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ 2.70 ಕೋಟಿ ರೂಪಾಯಿ ಆದಾಯ ಕೇವಲ 5 ದಿನದಲ್ಲೇ ಹರಿದುಬಂದಿದೆ ಎಂಬ ಮಾಹಿತಿ ದೊರೆತಿದೆ.
ಇದನ್ನೂ ಓದಿ: ಮಾದಪ್ಪನ ಬೆಟ್ಟಕ್ಕೆ 5 ದಿನದಲ್ಲಿ 12 ಲಕ್ಷ ಭಕ್ತರ ಭೇಟಿ: 2.7 ಕೋಟಿ ರೂ ಆದಾಯ ಸಂಗ್ರಹ