ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಟ್ರ್ಯಾಕ್ಟರ್: ಮೂವರ ಸಾವು - ಈಟಿವಿ ಭಾರತ ಕನ್ನಡ
🎬 Watch Now: Feature Video
Published : Dec 15, 2023, 2:08 PM IST
ನಳಂದ: ಬಿಹಾರದ ನಳಂದದಲ್ಲಿ ಅತೀ ವೇಗವಾಗಿ ಬಂದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಇಲ್ಲಿಯ ಚಾಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಮೆರಾ ಬಿಹ್ತಾ ಪಥ್‌ನ ಗ್ರಾಮದ ಬಳಿ ಟ್ರ್ಯಾಕ್ಟರ್ 20 ಅಡಿ ಮೇಲಿಂದ ಹಳ್ಳಕ್ಕೆ ಬಿದ್ದಿದೆ. ಈ ವೇಳೆ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕುರಿತು ಮಾಹಿತಿ ಪಡೆದು ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯ ಠಾಣಾ ಪೊಲೀಸರು ಜೆಸಿಬಿ ಸಹಾಯದಿಂದ ಟ್ರ್ಯಾಕ್ಟರ್ ಹೊರತೆಗೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆ ಪ್ರಭಾರಿ ದಿನೇಶ್ ಕುಮಾರ್ ಮಾಹಿತಿ ನೀಡಿದ್ದು, ಮೃತರು ಮಾನಪುರದಿಂದ ಟ್ರ್ಯಾಕ್ಟರ್‌ನಲ್ಲಿ ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದರು. ಈ ವೇಳೆ, ಚಾಲಕ ವೇಗದ ಚಾಲನೆಯಿಂದ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮೃತರಲ್ಲಿ ಒಬ್ಬ ಪೆಧ್ಕಾ ಗ್ರಾಮದ ನಿವಾಸಿ ಮುಖೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬರು ಟ್ರ್ಯಾಕ್ಟರ್ ಚಾಲಕನ ಮಗ ಎಂದು ತಿಳಿದು ಬಂದಿದೆ. ಒಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕಲಬುರಗಿ: ಹಿಟ್ ಅಂಡ್ ರನ್: ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯನ ತಾಯಿ ಸಾವು