ಕುಸಿದು ಬಿತ್ತು ನಿರ್ಮಾಣ ಹಂತದ ಬೃಹತ್ ಸೇತುವೆ : ವಿಡಿಯೋ - ಈಟಿವಿ ಭಾರತ ಕನ್ನಡ ನ್ಯೂಸ್
🎬 Watch Now: Feature Video
ಭಾಗಲ್ಪುರ (ಬಿಹಾರ): ಬಿಹಾರದ ಭಾಗಲ್ಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಬೃಹತ್ ಸೇತುವೆಯೊಂದು ಕುಸಿದುಬಿದ್ದಿದೆ. ಸುಲ್ತಾನ್ ಗಂಜ್ ಮತ್ತು ಅಗುವಾನಿ ನಡುವೆ ಗಂಗಾ ನದಿಗೆ ನಿರ್ಮಿಸಲಾಗಿರುವ ಸೇತುವೆ ಕುಸಿದುಬಿದ್ದಿದೆ. ಸೇತುವೆ ಕುಸಿದು ಬೀಳುತ್ತಿರುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಇದೀಗ ಎಲ್ಲೆಡೆ ವೈರಲ್ ಆಗಿದೆ.
ಸುಲ್ತಾನ್ ಗಂಜ್ ಮತ್ತು ಅಗುವಾನಿ ನಡುವೆ ಗಂಗಾನದಿಗೆ ಈ ಸೇತುವೆಯನ್ನು ನಿರ್ಮಿಸಲಾಗುತ್ತಿತ್ತು. ಈ ಸೇತುವೆಯ ಕೆಲ ಕಂಬಗಳು ಕುಸಿದಿದ್ದು, ಸೇತುವೆ ಭಾಗಶಃ ಗಂಗಾ ನದಿ ಪಾಲಾಗಿದೆ. ಸುಮಾರು ನೂರು ಮೀಟರ್ ಉದ್ದದ ಸೇತುವೆ ಮುಳುಗಡೆಯಾಗಿದೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಈ ಸೇತುವೆ ಕುಸಿದು ಬಿದ್ದಿತ್ತು. ಈ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಮತ್ತೊಮ್ಮೆ ಸೇತುವೆ ಕುಸಿದಿರುವುದು ಸೇತುವೆಯ ಕಳಪೆ ಕಾಮಗಾರಿ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಸೇತುವೆ ನಿರ್ಮಾಣ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಯೋಗೇಂದ್ರ ಕುಮಾರ್, "ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದೆ. ಸೇತುವೆಯ ಕೆಲವು ಕಂಬಗಳು ಕುಸಿದು ಸೇತುವೆ ಬಿದ್ದಿದೆ. ನಾವು ಸ್ಥಳಕ್ಕೆ ತೆರಳುತ್ತಿದ್ದೇವೆ. ಬಳಿಕ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದು ಹೇಳಿದರು. ಈ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಇದನ್ನೂ ಓದಿ : ಬೈಕ್ ಸ್ಟಂಟ್ ಮಾಡಲು ಹೋಗಿ ಡಿವೈಡರ್ಗೆ ಗುದ್ದಿದ ಯುವಕರು : ಭಯಾನಕ ವಿಡಿಯೋ ನೋಡಿ