ಉತ್ತರಕನ್ನಡ: ಇಂದಿರಾ ಕ್ಯಾಂಟೀನ್ ನಲ್ಲಿ ಉಪಹಾರ ಸೇವಿಸಿದ ಜಿಲ್ಲಾಧಿಕಾರಿ

🎬 Watch Now: Feature Video

thumbnail

By ETV Bharat Karnataka Team

Published : Dec 9, 2023, 11:03 PM IST

ಕಾರವಾರ: ನಗರದ ಕೆಇಬಿ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್​ಗೆ ಶನಿವಾರ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್​ ಅವರು ಬೆಳಗಿನ ಉಪಹಾರ ಸೇವಿಸಿ ಆಹಾರದ ರುಚಿ ಮತ್ತು ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ಯಾಂಟೀನ್​​ನಲ್ಲಿ ಶುಚಿ ಮತ್ತು ರುಚಿಗೆ ಯಾವಾಗಲೂ ಹೆಚ್ಚಿನ ಪ್ರಥಮಾದ್ಯತೆ ನೀಡುವಂತೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಕ್ಯಾಂಟೀನ್ ಉಪಯೋಗಕ್ಕೆ ನೀಡಿರುವ ಫ್ರಿಡ್ಜ್ ಮತ್ತಿತರ ಯಂತ್ರೋಪಕರಣಗಳನ್ನು ವ್ಯವಸ್ಥಿತವಾಗಿ ಬಳಸುವಂತೆ ಹಾಗೂ ಗ್ರಾಹಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಸೂಚನೆ ನೀಡಿದರು.

ಸರ್ಕಾರ ಸಾರ್ವಜನಿಕರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ಒದಗಿಸುವ ಉದ್ದೇಶದಿಂದ ಆರಂಭಿಸಿರುವ ಇಂದಿರಾ ಕ್ಯಾಂಟಿನ್ ಸೇವೆ ಸಾರ್ವಜನಿಕರಿಗೆ ಅನುಕೂಲವಾಗಬೇಕು. ಪ್ರತಿ ದಿನದ ಮೆನುವಿನ ಪ್ರಕಾರ ಆಹಾರ ತಯಾರಿಸಿ, ಗ್ರಾಹಕರಿಗೆ ವಿತರಿಸುವಂತೆ ಕ್ಯಾಂಟೀನ್ ಸಿಬ್ಬಂದಿಗೆ ಸಲಹೆ ನೀಡಿದರು.

ಇಂದಿರಾ ಕ್ಯಾಂಟೀನ್​​ನಲ್ಲಿ ಪ್ರತಿ ದಿನ ಬೆಳಗ್ಗೆ ಉಪಹಾರ ಮತ್ತು ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಇದ್ದು, ಉಪಹಾರಕ್ಕೆ ರೂ.5 ಮತ್ತು ಊಟಕ್ಕೆ ರೂ.10 ದರ ಮಾತ್ರ ನಿಗದಿಪಡಿಸಿದೆ. ಜಿಲ್ಲಾಧಿಕಾರಿ ಅವರು ಕ್ಯಾಂಟೀನ್ ನಲ್ಲಿ ತಯಾರಿಸಿದ್ದ ಮಸಾಲ ರೈಸ್ ಸವಿದು, ರುಚಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂಓದಿ: ಬರೋಬ್ಬರಿ 60 ವರ್ಷದ ಬಳಿಕ ವಿದ್ಯುತ್ ಸೌಲಭ್ಯ; ಶೆಟ್ಟಿಹಳ್ಳಿ- ಚಿತ್ರಶೆಟ್ಟಿಹಳ್ಳಿಗೆ ಹೊಸ ಬೆಳಕು​

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.