Vande bharat train: ಹುಬ್ಬಳ್ಳಿಗೆ ಆಗಮಿಸಿದ ವಂದೇ ಭಾರತ್.. ಟ್ರಯಲ್ ರನ್ ಟ್ರೈನ್ ವಿಡಿಯೋ! - Vande Bharat Intercity Semi High Speed Train
🎬 Watch Now: Feature Video
ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹು ನೀರಿಕ್ಷಿತ ಬೆಂಗಳೂರು-ಧಾರವಾಡ ಮಧ್ಯೆ ವಂದೇ ಭಾರತ್ ಇಂಟರ್‌ಸಿಟಿ ಸೆಮಿ ಹೈಸ್ಪೀಡ್ ರೈಲು ಇಂದು ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದೆ.
ಪ್ರಾಯೋಗಿಕ ಸಂಚಾರ ಆರಂಭಿಸಿರುವ ವಂದೇ ಭಾರತ್ ರೈಲು , ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಗ್ಗೆ 5.45ಕ್ಕೆ ಹೊರಟು, 9.58ಕ್ಕೆ ದಾವಣಗೆರೆ, 11-30ಕ್ಕೆ ಹುಬ್ಬಳ್ಳಿಗೆ ಬಂದು 11-35ಕ್ಕೆ ಧಾರವಾಡಕ್ಕೆ ತಲುಪಿದೆ. ಮಧ್ಯಾಹ್ನ 1.15ಕ್ಕೆ ಧಾರವಾಡದಿಂದ ಪ್ರಯಾಣ ಬೆಳೆಸುವ ರೈಲು. 1.35ಕ್ಕೆ ಹುಬ್ಬಳ್ಳಿಗೆ, 3.48ಕ್ಕೆ ದಾವಣಗೆರೆಗೆ, ರಾತ್ರಿ 7.45ಕ್ಕೆ ಯಶವಂತಪುರಕ್ಕೆ ಬಂದು ರಾತ್ರಿ 8.10ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ತಲುಪಲಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಜೂನ್ 26 ರಂದು ರೈಲು ಸಂಚಾರಕ್ಕೆ ಚಾಲನೆ ನೀಡಿದ ಬಳಿಕ ಅಧಿಕೃತವಾಗಿ ಓಡಾಟ ಆರಂಭಿಸಲಿದೆ. ಪೆರಂಬೂರಿನಲ್ಲಿರುವ ಚೆನ್ನೈ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಈ ರೈಲು ನಿರ್ಮಾಣಗೊಂಡಿದೆ. ಬೆಂಗಳೂರು–ಧಾರವಾಡದ ಅಂತರ 487 ಕಿಲೋಮೀಟರ್ ಇದ್ದು, ಸುಮಾರು ಏಳು ಗಂಟೆಗಳಲ್ಲಿ ಕ್ರಮಿಸಲಿದೆ. ಗಂಟೆಗೆ 160 ಕಿಲೋ ಮೀಟರ್ ವೇಗದ ಸಾಮರ್ಥ್ಯ ಇದ್ದರೂ ಈ ಮಾರ್ಗದಲ್ಲಿ ಗಂಟೆಗೆ 120 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ. ತಿರುವುಗಳು ಹೆಚ್ಚಿರುವುದು ವೇಗ ಕಡಿಮೆಯಾಗಲು ಕಾರಣ ಎನ್ನಲಾಗಿದೆ.
ಇದನ್ನೂ ಓದಿ: ಬೆಂಗಳೂರು - ಧಾರವಾಡ ವಂದೇ ಭಾರತ್ ರೈಲು ಪ್ರಾಯೋಗಿಕ ಓಡಾಟ ಪ್ರಾರಂಭ