ಧಾರವಾಡದಲ್ಲಿ ವರಮಹಾಲಕ್ಷ್ಮಿ ಸಂಭ್ರಮ: ಮಹಿಳೆಯರಿಗೆ ಅರಿಶಿನ, ಕುಂಕುಮ, ಬಾಗಿನ ವಿತರಣೆ - ದೇವಿಗೆ ವಿಶೇಷ ಪೂಜೆ

🎬 Watch Now: Feature Video

thumbnail

By ETV Bharat Karnataka Team

Published : Aug 25, 2023, 12:22 PM IST

ಧಾರವಾಡ : ಜಿಲ್ಲೆಯಲ್ಲಿ ವರಮಹಾಲಕ್ಷ್ಮಿ ಸಂಭ್ರಮ ಮನೆಮಾಡಿದೆ. ನಗರದ ದುರ್ಗಾದೇವಿ ದೇವಸ್ಥಾನಕ್ಕೆ ಆಗಮಿಸಿದ ಮಹಿಳೆಯರಿಗೆ ಅರಿಶಿನ, ಕುಂಕುಮ, ಹೂವು, ಹಣ್ಣು, ಹಸಿರು ಕಣ ಸಹಿತ ಬಾಗಿನ ನೀಡಲಾಯಿತು. ಮರಾಠ ಕಾಲೋನಿಯಲ್ಲಿರುವ ದುರ್ಗಾದೇವಿ ದೇವಸ್ಥಾನದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ‌ ಅವರು ಮುತೈದೆಯರಿಗೆ ಉಡಿ ತುಂಬಿ ಬಳಿಕ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಮೂಲಕ ಜಿಲ್ಲೆಯ 880 ದೇವಸ್ಥಾನಗಳಲ್ಲಿ ಬಾಗಿನ ವಿತರಣೆಗೆ ಅಪರ ಜಿಲ್ಲಾಧಿಕಾರಿ ಸಾಂಕೇತಿಕ ಚಾಲನೆ ನೀಡಿದರು.

ಇದನ್ನೂ ಓದಿ : ವರಮಹಾಲಕ್ಷ್ಮಿ ಹಬ್ಬ : ಸರ್ಕಾರದಿಂದ ಮಹಿಳೆಯರಿಗೆ ಅರಿಶಿನ, ಕುಂಕುಮ, ಬಳೆ ಉಡುಗೊರೆ

ಇನ್ನು ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಮಹತ್ವಪೂರ್ಣ ಸ್ಥಾನ ನೀಡಿ ಗೌರವಿಸಲಾಗುತ್ತದೆ. ಈ ಬಾರಿ ವರಮಹಾಲಕ್ಷ್ಮಿ ಹಬ್ಬದಂದು ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸುವ ಜೊತೆಗೆ ದೇವಾಲಯಗಳಿಗೆ ಆಗಮಿಸುವ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿನ - ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಇದನ್ನೂ ಓದಿ : ವರಮಹಾಲಕ್ಷ್ಮಿ ಹಬ್ಬ : ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ; ಕೋಲಾರದಲ್ಲಿ ಹೂಗಳಿಗೆ ಭಾರಿ ಡಿಮ್ಯಾಂಡ್‌

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.