ವಿಜಯಪುರ: ಹೆಚ್ಚಿದ ವೇಗ, ಬ್ಲಾಸ್ಟ್ ಆದ ಟೈರ್, ಹೊತ್ತಿ ಉರಿದ ಲಾರಿ - information videoas
🎬 Watch Now: Feature Video
ವಿಜಯಪುರ: ವೇಗವಾಗಿ ಚಲಿಸುತ್ತಿದ್ದ ಲಾರಿಯ ಟೈರ್ ಬ್ಲಾಸ್ಟ್ ಆಗಿ ಟೋಲ್ ಗೇಟ್‌ಗೆ ಡಿಕ್ಕಿ ಹೊಡೆದು ಲಾರಿಗೆ ಬೆಂಕಿ ತಗುಲಿ ಲಾರಿ ಭಸ್ಮವಾದ ಘಟನೆ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಬಳಿ ಭಾನುವಾರ ಸಂಜೆ ನಡೆದಿದೆ. ಮೆಹಬೂಬ್‌ಸಾಬ್ ಎಂಬುವರಿಗೆ ಸೇರಿದ್ದ ಕೆಎ 50 ಎ 7011 ಲಾರಿ ಬೆಂಕಿಗಾಹುತಿಯಾಗಿದೆ. ವೇಗವಾಗಿ ಚಲಿಸುತ್ತಿದ್ದ ವೇಳೆ ಲಾರಿಯ ಟೈರ್ ಬ್ಲಾಸ್ಟ್ ಆದ ಕಾರಣ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲಿನರ್ ಲಾರಿಯಿಂದ ಹೊರಗಡೆ ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
Last Updated : Feb 3, 2023, 8:37 PM IST