ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ವಿಚಾರ: ಪ್ರತಿಕ್ರಿಯೆ ನೀಡಲು ಶಾಸಕ ಬೆಲ್ಲದ್ ನಿರಾಕರಣೆ - ಪ್ರತಿಕ್ರಿಯೆಗೆ ಶಾಸಕ ಬೆಲ್ಲದ್ ನಿರಾಕರಣೆ
🎬 Watch Now: Feature Video
Published : Nov 11, 2023, 5:49 PM IST
|Updated : Nov 11, 2023, 9:31 PM IST
ಧಾರವಾಡ: ವಿದ್ಯಾರ್ಥಿಗಳಿಗೆ ಸುಸಜ್ಜಿತ ಬಾಸ್ಕೆಟ್‌ಬಾಲ್ ಕ್ರೀಡಾಂಗಣವನ್ನು ನಿರ್ಮಿಸಿ ಕೊಟ್ಟಿರುವುದು ಶ್ಲಾಘನೀಯ ಎಂದು ಶಾಸಕ ಅರವಿಂದ್ ಬೆಲ್ಲದ ಹೇಳಿದರು.
ಧಾರವಾಡದ ಜನತಾ ಶಿಕ್ಷಣ ಸಮಿತಿ ನೂತನವಾಗಿ ನಿರ್ಮಿಸಿರುವ ಬಾಸ್ಕೆಟ್ ಬಾಲ್ ಕ್ರೀಡಾಂಗಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಸುಸಜ್ಜಿತ ಬಾಸ್ಕೆಟ್‌ಬಾಲ್ ನಿರ್ಮಿಸಿದೆ. ನಾನು ಕೂಡ ಬಾಸ್ಕೆಟ್‌ಬಾಲ್ ಆಟಗಾರ. ಚಿಕ್ಕವನಿದ್ದಾಗ ನಾನು ರಾಜ್ಯಮಟ್ಟದ ಬಾಸ್ಕೆಟ್‌ಬಾಲ್ ಆಟಗಾರ ಆಗಿದ್ದೆ ಎಂದು ಬಾಲ್ಯದ ತಮ್ಮ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡರು. ಉತ್ತಮ ಬಾಸ್ಕೆಟ್‌ಬಾಲ್ ಕ್ರೀಡಾಂಗಣವನ್ನು ನಿರ್ಮಿಸಿದ್ದಕ್ಕಾಗಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಮತ್ತು ಆಡಳಿತ ಮಂಡಳಿಗೆ ವಿಶೇಷ ಅಭಿನಂದನೆ ಸಲ್ಲಿಸಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿಎಸ್ವೈ ಪುತ್ರ ವಿಜಯೇಂದ್ರ ನೇಮಕದ ವಿಚಾರದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಅರವಿಂದ ಬೆಲ್ಲದ್ ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಈ ಹಿಂದೆ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪ ಅವರನ್ನು ಹೈಕಮಾಂಡ್ ಕೆಳಗಿಳಿಸಿದ ನಂತರ ಬೆಲ್ಲದ್ ಅವರು ಮುಖ್ಯಮಂತ್ರಿ ರೇಸ್‌ನಲ್ಲಿದ್ದರು.
ಇದನ್ನೂ ಓದಿ:ರಾಜ್ಯಾಧ್ಯಕ್ಷರ ಆಯ್ಕೆ ಮಾಡುವ ವಿಚಾರದಲ್ಲಿ ಬಿಜೆಪಿ ಫೇಲ್: ಜಗದೀಶ್ ಶೆಟ್ಟರ್