ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದಿಂದ ನಳಿನ್ ಕುಮಾರ್ಗೆ ಬಿಜೆಪಿ ಟಿಕೆಟ್: ವಿಜಯೇಂದ್ರ ಸುಳಿವು - Vijayendra in mangaluru
🎬 Watch Now: Feature Video
Published : Nov 22, 2023, 8:29 PM IST
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿದೆ ಎಂಬ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸುಳಿವು ನೀಡಿದ್ದಾರೆ. ಇಂದು ಮಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ, ಲೋಕಸಭಾ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
''ಮುಂದಿನ ಲೋಕಸಭಾ ಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ'' ಎಂದು ಹೇಳುವ ಮೂಲಕ ಕಟೀಲ್ ಪರ ವಿಜಯೇಂದ್ರ ಬ್ಯಾಟಿಂಗ್ ಮಾಡಿರುವುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ.
ಈಗಾಗಲೇ ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರವು ಮುನ್ನೆಲೆಯಲ್ಲಿದೆ. ಪುತ್ತೂರು ಕ್ಷೇತ್ರದಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಬಿಜೆಪಿ ಭದ್ರಕೋಟೆಯಲ್ಲಿ ಪಕ್ಷವನ್ನು ಮೂರನೇ ಸ್ಥಾನಕ್ಕೆ ತಳ್ಳಿದ ಅರುಣ್ ಕುಮಾರ್ ಪುತ್ತಿಲ ಅವರೂ ಕೂಡ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಇದನ್ನೂ ಓದಿ: ರಾಹುಕಾಲಕ್ಕೂ ರಾಹುಲ್ ಗಾಂಧಿಗೂ ಯಾವ ವ್ಯತ್ಯಾಸವೂ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ