ಮುಜಾಫರ್ಪುರದಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು.. ಬಿಗಿ ಬಂದೋಬಸ್ತ್ - Attack Police Station
🎬 Watch Now: Feature Video
Published : Oct 5, 2023, 9:38 AM IST
|Updated : Oct 5, 2023, 10:07 AM IST
ಮುಜಾಫರ್ಪುರ (ಬಿಹಾರ): ಬಿಹಾರದ ಮುಜಾಫರ್ಪೂರ ಜಿಲ್ಲೆಯ ಗುರ್ಹಾ ಗ್ರಾಮದ ಜನ ಇಲ್ಲಿಯ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಬಿಹಾರದಲ್ಲಿ ಮದ್ಯಮಾರಾಟ ನಿಷೇಧವಿದ್ದರೂ ಅಕ್ರಮವಾಗಿ ಮಾರಾಟದ ದಂಧೆಯಲ್ಲಿ ತೊಡಗಿದ್ದ ಗುಂಪಿನ ಮೇಲೆ ನಿನ್ನೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಗುರ್ಹಾಗ್ರಾಮದ ಯುವಕ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ.
ಈ ವಿಷಯ ಗ್ರಾಮಸ್ಥರಿಗೆ ತಿಳಿದ ಕೂಡಲೇ ಕೋಪಗೊಂಡ ಪೊಲೀಸ್ ಠಾಣೆಗೆ ನುಗ್ಗಿದ್ದಾರೆ. ನಂತರ ಪೊಲೀಸರು ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಇದರಿಂದ ಇಡೀ ಪೊಲೀಸ್ ಠಾಣೆ ಬೆಂಕಿಗಾಹುತಿಯಾಗಿದೆ. ಕೂಡಲೇ ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಸದ್ಯ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಮೃತನ ಪೋಷಕರು ತಮ್ಮ ಮಗನ ಸಾವಿಗೆ ಪೊಲೀಸರೆ ನೇರ ಹೊಣೆ ಎಂದು ಆರೋಪ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ನಾಗ್ಪುರದ 2 ಸರ್ಕಾರಿ ಆಸ್ಪತ್ರೆಗಳಲ್ಲಿ 24 ಗಂಟೆಗಳಲ್ಲಿ 25 ರೋಗಿಗಳ ಸಾವು