ತುಮಕೂರು: ತಿರುವು ಪಡೆಯುತ್ತಿದ್ದ ಬಸ್ಗೆ ವೇಗದಿಂದ ಬಂದು ಡಿಕ್ಕಿ ಹೊಡೆದ ಬೈಕ್- ವಿಡಿಯೋ - ಕೆಎಸ್ಆರ್ಟಿಸಿ ಬಸ್ ನಿಲ್ದಾಣ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/11-12-2023/640-480-20237844-thumbnail-16x9-am.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Dec 11, 2023, 2:28 PM IST
ತುಮಕೂರು: ಅತಿವೇಗವಾಗಿ ಬಂದು ಬಸ್ಗೆ ಬೈಕ್ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಈ ಭೀಕರ ದೃಶ್ಯ ಅದೇ ಮಾರ್ಗವಾಗಿ ಬರುತ್ತಿದ್ದ ಮತ್ತೊಂದು ಬೈಕ್ ಸವಾರನ ಹೆಲ್ಮೆಟ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ತೆರಳಲು ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಒಮ್ಮೆಲೇ ಗಾಳಿಯಲ್ಲಿ ಗರಗರನೆ ತಿರುಗಿ ರಸ್ತೆಗೆ ಅಪ್ಪಳಿಸಿದ್ದಾನೆ. ಅದೃಷ್ಟವಶಾತ್ ಹೆಲ್ಮೆಟ್ ಧರಿಸಿದ್ದರಿಂದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಂಗಳೂರು ಕಡೆಯಿಂದ ಬೈಕ್ ಸವಾರ ಬರುತ್ತಿದ್ದು, ಆತನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರು : ಎರಡು ಸರ್ಕಾರಿ ಬಸ್ಗಳ ಮುಖಾಮುಖಿ ಡಿಕ್ಕಿ, 20 ಜನರಿಗೆ ಗಾಯ
ಪ್ರತ್ಯೇಕ ಪ್ರಕರಣ: ಮಂಡ್ಯದಲ್ಲಿ ಸೋಮವಾರ ಬೆಳಗ್ಗೆ ಮಹಿಳೆ ಮೇಲೆ ಸರ್ಕಾರಿ ಬಸ್ ಹರಿದು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನಾವಳಿಯ ದೃಶ್ಯ ಅಲ್ಲೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಸ್ನ ಚಕ್ರ ಆಕೆಯ ಮೇಲೆ ಹರಿದು ಹೋಗಿದ್ದರಿಂದ ಸ್ಥಳದಲ್ಲೇ ಮಹಿಳೆಯ ಪ್ರಾಣ ಪಕ್ಷಿ ಹಾರಿಹೋಗಿದೆ.