Watch video: ಬಸ್ ಮತ್ತು ಮಿನಿ ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಒಬ್ಬನ ಸಾವು, 27 ಮಂದಿಗೆ ಗಾಯ
🎬 Watch Now: Feature Video
ಕಣ್ಣೂರು (ಕೇರಳ): ಬಸ್ ಮತ್ತು ಮಿನಿ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್ನಲ್ಲಿದ್ದ ಪ್ರಯಾಣಿಕರೊಬ್ಬರು ಸಾವನ್ನಪ್ಪಿರುವ ಘಟನೆ ಕಣ್ಣೂರು ಜಿಲ್ಲೆಯ ತೊಟ್ಟಡ ಎಂಬಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಈ ಅಪಘಾತ ಸಂಭವಿಸಿದ್ದು, 24 ಪ್ರಯಾಣಿಕರು ಗಾಯಗೊಂಡಿದ್ದಾರೆ. ಮತ್ತೊಂದೆಡೆ ಲಾರಿ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಕೇರಳ ಜಿಲ್ಲೆಯ ಪತ್ತನಂತಿಟ್ಟಕ್ಕೆ ತೆರಳುತ್ತಿದ್ದ ಕಲ್ಲಡ ಟ್ರಾವೆಲ್ಸ್ನ ಬಸ್ಗೆ ಮೀನು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು, ಬಸ್ ಪಲ್ಟಿಯಾಗಿದೆ.
ಗಾಯಾಳುಗಳನ್ನು ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಿಮ್ಸ್ ಆಸ್ಪತ್ರೆಗೆ ದಾಖಲಾದ 19ರಲ್ಲಿ 9 ಮಂದಿಯನ್ನು ಹಾಗೂ ಬೇಬಿ ಮೆಮೋರಿಯಲ್ ಆಸ್ಪತ್ರೆಗೆ ದಾಖಲಾಗಿದೆ. 11 ಮಂದಿಯಲ್ಲಿ 6 ಮಂದಿಯನ್ನು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಡಿಸ್ಚಾರ್ಜ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಕ್ರೇನ್ ಸಹಾಯದಿಂದ ಪಲ್ಟಿಯಾಗಿದ್ದ ಬಸ್ ಅನ್ನು ರಸ್ತೆಯಿಂದ ಹೊರತೆಗೆದಿದ್ದಾರೆ.
ಇದನ್ನೂ ಓದಿ : Watch video: ಮಹಾರಾಷ್ಟ್ರ- ಮಧ್ಯಪ್ರದೇಶ ಗಡಿಯಲ್ಲಿ ಭೀಕರ ರಸ್ತೆ ಅಪಘಾತ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ..